ಗೋವುಗಳ ಕಳ್ಳ ಸಾಗಣೆ ಪ್ರಕರಣ: ಪಶ್ಚಿಮ ಬಂಗಾಳದ ಹಲವೆಡೆ ಸಿಬಿಐ ಶೋಧ

ನವದೆಹಲಿ: ಗೋವುಗಳ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳವು (ಸಿಬಿಐ) ಪಶ್ಚಿಮ ಬಂಗಾಳದ ಹಲವಡೆ ಶೋಧ ನಡೆಸಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮತ್ತು ಟಿಎಂಸಿ ನಾಯಕ ವಿನಯ್ ಮಿಶ್ರಾ ಅವರ ಮನೆಯಲ್ಲೂ ಸಿಬಿಐ ಶೋಧ ನಡೆಸಿದೆ. ಅಲ್ಲದೆ ವಿನಯ್ ಮಿಶ್ರಾ ಅವರಿಗೆ ದೇಶದಿಂದ ಹೊರ ಹೋಗದಂತೆ ಲುಕ್‌ಔಟ್ ನೋಟಿಸ್ ಕೂಡ ಜಾರಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದರು.
ವಿನಯ್ ಮಿಶ್ರಾಗೆ ಸಂಬಂಧಿಸಿದ ಕೋಲ್ಕತ್ತದ ಎರಡು ಸ್ಥಳಗಳು ಮತ್ತು ಇತರ ಪ್ರದೇಶಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈಗಾಗಲೇ ಈ ಪ್ರಕರಣದಡಿ ಗೋವು ಕಳ್ಳ ಸಾಗಣೆಯ ಕಿಂಗ್‌ಪಿನ್ ಎನ್ನಲಾದ ಇಬ್ಬರು ವ್ಯಕ್ತಿಗಳು ಮತ್ತು ಬಿಎಸ್‌ಎಫ್‌ನ ಇಬ್ಬರು ಅಧಿಕಾರಿಗಳನ್ನು ಸಿಬಿಐ ಬಂಧಿಸಿದೆ ಅವರು ಮಾಹಿತಿ ನೀಡಿದರು.
ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ ಗೋವುಕಳ್ಳ ಸಾಗಣೆ ಪ್ರಕರಣಗಳು ಹೆಚ್ಚಿವೆ ಎಂಬುದು ಸಿಬಿಐನ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಗೋವುಗಳ ಕಳ್ಖ ಸಾಗಣೆಗೆ ಬಿಎಸ್‌ಎಫ್ ಮತ್ತು ಕಸ್ಟಮ್ಸ್‌ನ ಕೆಲ ಭ್ರಷ್ಟ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪವಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.