ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಎಂಸಿ ಮುಖಂಡ ಅನುಬ್ರತಾ ಮೊಂಡಲ್ ಮಾರ್ಚ್‌ 10ರವರೆಗೂ ಇ.ಡಿ ವಶಕ್ಕೆ

Last Updated 8 ಮಾರ್ಚ್ 2023, 3:22 IST
ಅಕ್ಷರ ಗಾತ್ರ

ಕೋಲ್ಕತ್ತ: ಜಾನುವಾರು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಮುಖಂಡ ಅನುಬ್ರತಾ ಮೊಂಡಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾರ್ಚ್‌ 10ರವರೆಗೂ ವಶಕ್ಕೆ ಪಡೆದಿದ್ದಾರೆ.

ಅಕ್ರಮ ಹಣ ವರ್ಗಾವಣೆ ಹಾಗೂ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿನ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ಹಿಂದೆ ಅವರು ಅನಾರೋಗ್ಯ ಕಾರಣ ನೀಡಿ ಹಲವು ಬಾರಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಮಂಗಳವಾರ ಕೂಡ ಕೋಲ್ಕತ್ತದ ಇಎಸ್‌ಐ ಆಸ್ಪತ್ರೆಗೆ ದಾಖಲಾಗಿದ್ದರು. ಮೊಂಡಲ್‌ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ ಬಳಿಕ ಇ.ಡಿ ಅಧಿಕಾರಿಗಳು ವಿಮಾನದ ಮೂಲಕ ಅವರನ್ನು ದೆಹಲಿಗೆ ಕರೆತಂದರು.

ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಇ.ಡಿ ಅಧಿಕಾರಿಗಳು ಮೊಂಡಲ್‌ ಅವರನ್ನು ಹಾಜರುಪಡಿಸಿದರು. ನ್ಯಾಯಾಲಯ ಅವರನ್ನು ಮಾರ್ಚ್‌ 10ರವರೆಗೂ ಇ.ಡಿ ಕಸ್ಟಡಿಗೆ ನೀಡಿದೆ.

ಅನುಬ್ರತಾ ಮೊಂಡಲ್‌ ಅವರು ಬಿರ್ಭುಮ್‌ನ ಟಿಎಂಸಿಯ ಜಿಲ್ಲಾಧ್ಯಕ್ಷರಾಗಿದ್ದಾರೆ. ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತರು ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT