ಭಾನುವಾರ, ಏಪ್ರಿಲ್ 2, 2023
23 °C

ಬ್ಯಾಂಕ್ ದರೋಡೆ ತಪ್ಪಿಸಿದ ಮಹಿಳಾ ಪೊಲೀಸ್ ಸಿಬ್ಬಂದಿ: ಸಾರ್ವಜನಿಕರಿಂದ ಮೆಚ್ಚುಗೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಪಟ್ನಾ: ಬಿಹಾರದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಸಮಯ ಪ್ರಜ್ಞೆ ತೋರುವ ಮೂಲಕ ಬ್ಯಾಂಕ್‌ ದರೋಡೆ ಯತ್ನ ತಪ್ಪಿಸಿದ್ದು, ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹಾಜಿಪುರದ ಗ್ರಾಮೀಣ ಬ್ಯಾಂಕ್‌ನೊಳಗೆ ಬಲವಂತವಾಗಿ ನುಗ್ಗಲು ಯತ್ನಿಸಿದ ಮೂವರು ಶಸ್ತ್ರಸಜ್ಜಿತ ದರೋಡೆಕೋರರನ್ನು ತಡೆಯುವಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಜೂಹಿ ಕುಮಾರಿ ಮತ್ತು ಶಾಂತಿ ಕುಮಾರಿ ಅವರು ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬ್ಯಾಂಕ್‌ನ ಪ್ರವೇಶದ್ವಾರದಲ್ಲಿ ಕುಳಿತಿದ್ದರು. ಬ್ಯಾಂಕ್ ಒಳಗೆ ಹೋಗಲು ಯತ್ನಿಸಿದ ಮೂವರು ಶಸ್ತ್ರಸಜ್ಜಿತ ವ್ಯಕ್ತಿಗಳನ್ನು ತಡೆದು ದಾಖಲೆ ತೋರಿಸಲು ಪ್ರಶ್ನಿಸಿದ್ದರು. ಕೂಡಲೇ ಆರೋಪಿಗಳು ಪಿಸ್ತೂಲ್‌ ತೋರಿಸಿ ಬೆದರಿಸಲು ಮುಂದಾಗಿದ್ದರು. ಅವರೊಂದಿಗೆ ಪೊಲೀಸ್ ಸಿಬ್ಬಂದಿ ಸೆಣಸಾಟ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಆರೋಪಿಗಳು ನಮ್ಮ ಬಳಿ ಇದ್ದ ರೈಫಲ್‌ಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಿದರು. ಏನೇ ಆಗಲಿ ಅವರನ್ನು ಒಳಗೆ ಹೋಗುವುದಕ್ಕೆ ಬಿಡಬಾರದು ಎಂದು ನಾವು ನಿರ್ಧರಿಸಿದ್ದೇವು. ಆದರೆ, ಒಂದು ಹಂತದಲ್ಲಿ ಕಿಡಿಗೇಡಿಗಳು ಜೂಹಿ ಮೇಲೆ ಗುಂಡು ಹಾರಿಸಲು ಮುಂದಾಗಿದ್ದರು. ಘಟನೆಯಲ್ಲಿ ಜೂಹಿ ಕುಮಾರಿ ಗಾಯಗೊಂಡಿದ್ದಾರೆ ಎಂದು ಶಾಂತಿ ವಿವರಿಸಿದ್ದಾರೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ...

* ಭಾರತಕ್ಕೆ ನ್ಯೂಜಿಲೆಂಡ್ ಪ್ರಧಾನಿ ಜಸಿಂದಾರಂತಹ ನಾಯಕರ ಅಗತ್ಯವಿದೆ: ಜೈರಾಮ್ ರಮೇಶ್

* ₹7.4 ಕೋಟಿ ವಿಮೆ ಹಣಕ್ಕಾಗಿ ತನ್ನದೇ ಸಾವಿನ ನಾಟಕವಾಡಿದ ಸರ್ಕಾರಿ ಉದ್ಯೋಗಿ!

* ವಿವಾದಾತ್ಮಕ ಹೇಳಿಕೆ: ತಮಿಳುನಾಡು ರಾಜ್ಯಪಾಲರಿಂದ ಮಾನನಷ್ಟ ಮೊಕದ್ದಮೆ ದಾಖಲು

* ದುಬೈನಲ್ಲಿ ವ್ಯಕ್ತಿಯ ಜೀವ ಉಳಿಸಲು ನೆರವಾದ ನಟ ಸೋನು ಸೂದ್: ಭಾರಿ ಮೆಚ್ಚುಗೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು