ತೆಲಂಗಾಣ: ವಿದ್ಯಾರ್ಥಿ ಮೇಲೆ ಬಿಜೆಪಿ ಮುಖಂಡನ ಮಗನಿಂದ ಹಲ್ಲೆ, ಎಫ್‌ಐಆರ್ ದಾಖಲು

ಹೈದರಾಬಾದ್: ತೆಲಂಗಾಣ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಸಹ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಘಟನೆ ಕುರಿತು ಮಹೀಂದ್ರಾ ವಿಶ್ವವಿದ್ಯಾಲಯ ನೀಡಿದ ದೂರಿನ ಆಧಾರದ ಮೇಲೆ ಬಂಡಿ ಭಗೀರಥ್ ಸಾಯಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶ್ರೀರಾಮ್ ಮೇಲೆ ಭಗೀರಥ್ ಸಾಯಿ ಹಲ್ಲೆ ನಡೆಸುತ್ತಿರುವ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಭಗೀರಥ್ ಸಾಯಿ ಸ್ನೇಹಿತರೊಂದಿಗೆ ಸೇರಿ ಹಾಸ್ಟೆಲ್ ಕೊಠಡಿಯಲ್ಲಿ ಶ್ರೀರಾಮ್‌ನನ್ನು ನಿಂದಿಸಿದ್ದು, ಥಳಿಸಿದ್ದಾರೆ. ಬಳಿಕ ಕಾಲೇಜು ಆವರಣದಲ್ಲಿಯೂ ಶ್ರೀರಾಮ್ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶ್ರೀರಾಮ್ ನನ್ನ ಪರಿಚಯಸ್ಥ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಭಗೀರಥ್ ಹೇಳಿಕೊಂಡಿದ್ದಾರೆ.
‘ನಾನು ಯುವತಿಗೆ ಆಕ್ಷೇಪಾರ್ಹ ಸಂದೇಶ ಕಳುಹಿಸಿದ್ದೆ. ಇದೇ ವಿಚಾರವಾಗಿ ಚರ್ಚಿಸಲು ಭಗೀರಥ್ ನನ್ನನ್ನು ಸಂಪರ್ಕಿಸಿದ್ದ. ಆಗ ನಾನು ಆತನ ಬಳಿಯೂ ಅನುಚಿತವಾಗಿ ವರ್ತಿಸಿದ್ದರಿಂದ ಭಗೀರಥ್ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ’ ಎಂದು ಶ್ರೀರಾಮ್ ಹೇಳಿಕೆ ನೀಡಿದ್ದಾನೆ.
ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಬಳಿಕ ರಾಜಿ ಮಾಡಿಕೊಂಡಿದ್ದೇವೆ ಎಂದು ಶ್ರೀರಾಮ್ ಹೇಳಿಕೊಂಡಿದ್ದಾರೆ.
ಕೆಸಿಆರ್ ಪಿತೂರಿ ಆರೋಪ: ನನ್ನ ವಿರುದ್ಧ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ಪಿತೂರಿ ನಡೆಸಿದ್ದಾರೆ ಎಂದು ಸಂಜಯ್ ಕುಮಾರ್ ಆರೋಪಿಸಿದ್ದಾರೆ.
‘ವಿದ್ಯಾರ್ಥಿಗಳು ಜಗಳವಾಡುವುದು ಸಹಜ. ತಮ್ಮ ತಪ್ಪಿನ ಅರಿವಾದ ಮೇಲೆ ತಿದ್ದಿಕೊಳ್ಳುತ್ತಾರೆ. ಮಕ್ಕಳನ್ನು ರಾಜಕೀಯದಿಂದ ದೂರವಿಡಬೇಕು. ಕೆಸಿಆರ್ ಆದೇಶದ ಮೇರೆಗೆ ವಿಶ್ವವಿದ್ಯಾಲಯ ನನ್ನ ಬಾಯಿ ಮುಚ್ಚಿಸಲು ಮುಂದಾಗಿದೆ’ ಎಂದು ಸಂಜಯ್ ದೂರಿದ್ದಾರೆ.
Case filed against Bandi Sai Bhageerath after a complaint from college authorities. He's the son of Telangana BJP chief Bandi Sanjay. We took up investigation. Notice will be served: Telangana Police senior official on viral video of Bandi Sai Bhageerath beating a fellow student pic.twitter.com/gsZ8HNgo93
— ANI (@ANI) January 18, 2023
A case was registered against Telangana BJP president Bandi Sanjay Kumar' son here on Tuesday for allegedly assaulting a student. A video of the incident purportedly showing one person slapping another has gone viral on social media. #viralvideo pic.twitter.com/vLySKnj84C
— ℝ𝕒𝕛 𝕄𝕒𝕛𝕚 (@Rajmajiofficial) January 18, 2023
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.