ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಧೀಶ ಹತ್ಯೆ ಪ್ರಕರಣ: ಮಾಹಿತಿ ನೀಡಿದವರಿಗೆ ₹ 5ಲಕ್ಷ ಬಹುಮಾನ ಘೋಷಿಸಿದ ಸಿಬಿಐ

Last Updated 15 ಆಗಸ್ಟ್ 2021, 13:46 IST
ಅಕ್ಷರ ಗಾತ್ರ

ನವದೆಹಲಿ: ಜಾರ್ಖಂಡ್‌ನ ಧನಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ ಹಂಚಿಕೊಳ್ಳುವವರಿಗೆ ಕೇಂದ್ರ ತನಿಖಾ ದಳವು (ಸಿಬಿಐ) ₹ 5 ಲಕ್ಷ ಬಹುಮಾನ ನೀಡುವುದಾಗಿ ಭಾನುವಾರ ಘೋಷಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿ ಮುಖ್ಯವಾದ ಮಾಹಿತಿಯನ್ನು ಹೊಂದಿದ್ದರೆ ಸಿಬಿಐನ ವಿಶೇಷ ಅಪರಾಧ ತಂಡದೊಂದಿಗೆ ಮಾಹಿತಿ ಹಂಚಿಕೊಳ್ಳಬಹುದು. ಧನಬಾದ್ ಸಿಎಸ್‌ಐಆರ್ ಸತ್ಕರ್ ಅತಿಥಿಗೃಹದಲ್ಲಿ ದೂರವಾಣಿ ಸಂಖ್ಯೆಗಳಾದ 7827728856, 011-24368640 ಮತ್ತು 24368641 ಮೂಲಕವೂ ಮಾಹಿತಿ ಹಂಚಿಕೊಳ್ಳಬಹುದು. ಅಪರಾಧಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ನೀಡುವ ವ್ಯಕ್ತಿಗೆ ₹ 5 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದೂ ಸಿಬಿಐ ಹೇಳಿದೆ.

ಜುಲೈ 28ರಂದು ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಉತ್ತಮ್ ಆನಂದ್ ಅವರಿಗೆ ಹಿಂದಿನಿಂದ ಬಂದ ಆಟೋರಿಕ್ಷಾವೊಂದು ಡಿಕ್ಕಿ ಹೊಡೆದಿತ್ತು. ಆಸ್ಪತ್ರೆಗೆ ಸೇರಿಸುವ ಮುನ್ನವೇ ಉತ್ತಮ್ ಅವರು ಸಾವನ್ನಪ್ಪಿದ್ದರು. ಇದು ಅಪಘಾತವಲ್ಲ, ಪೂರ್ವನಿಯೋಜಿತ ಹತ್ಯೆ ಎನ್ನುವ ಆರೋಪಗಳು ಕೇಳಿಬಂದಿದ್ದರಿಂದ ಪ್ರಕರಣದ ವಿಚಾರಣೆಯನ್ನು ಸಿಬಿಐ ನಡೆಸುತ್ತಿದೆ.

ಪ್ರಕರಣದ ಆರೋಪಿಗಳಾದ ಆಟೋರಿಕ್ಷಾ ಚಾಲಕ ಲಖನ್ ವರ್ಮಾ ಮತ್ತು ಆತನ ಸಹಚರ ರಾಹುಲ್ ವರ್ಮಾ ಅವರನ್ನು ಸಿಬಿಐ ವಶಕ್ಕೆ ತೆಗೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT