ಗುರುವಾರ , ಸೆಪ್ಟೆಂಬರ್ 23, 2021
27 °C

ಎನ್‌ಎಚ್‌ಎಐ ಅಧ್ಯಕ್ಷನ ಸೋಗಿನಲ್ಲಿ ₹80 ಲಕ್ಷ ವಂಚನೆ; ಆರೋಪಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಧ್ಯಕ್ಷನ ಸೋಗಿನಲ್ಲಿ ₹80 ಲಕ್ಷ ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಸಿಬಿಐ ಬಂಧಿಸಿದೆ’ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು.

‘ಬಿಹಾರದ ಮಧುಬಾನಿಯ ನಿವಾಸಿ ಮನೋಜ್‌ ಕುಮಾರ್‌ ಜಾನನ್ನು ಗುರುಗ್ರಾಮದಲ್ಲಿ ಬಂಧಿಸಲಾಗಿದೆ’ ಎಂದು ಅವರು ಹೇಳಿದರು.

‘ಈ ಪ್ರಕರಣ ಸಂಬಂಧ ದೆಹಲಿ, ಕೋಲ್ಕತ್ತ, ಮಧುಬಾನಿ ಮತ್ತು ಬೊಕಾರೊದ (ಸ್ಟೀಲ್‌ ಸಿಟಿ) 8 ಪ್ರದೇಶಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಈ ವೇಳೆ ಅವರಿಗೆ ಅಪರಾಧಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು 200 ಸಿಮ್‌ ಕಾರ್ಡ್‌ಗಳು ಸಿಕ್ಕಿವೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಆರೋಪಿ ಆಗಸ್ಟ್‌ 9ರ ತನಕ ಸಿಬಿಐ ಕಸ್ಟಡಿಯಲ್ಲಿ ಇರಲಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ಮಾಹಿತಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು