ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐನಿಂದ ಪವರ್‌ ಗ್ರಿಡ್‌ ಕಾರ್ಪೋರೇಷನ್ ಇ.ಡಿ ಝಾ, ಇತರ ಐವರ ಬಂಧನ

Last Updated 7 ಜುಲೈ 2022, 12:36 IST
ಅಕ್ಷರ ಗಾತ್ರ

ನವದೆಹಲಿ: ಟಾಟಾ ಪ್ರಾಜೆಕ್ಟ್ಸ್‌ ಕಂಪನಿಗೆ ನೆರವಾಗುವ ಸಲುವಾಗಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪವರ್‌ ಗ್ರಿಡ್‌ ಕಾರ್ಪೋರೇಷನ್ ಆಫ್‌ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಎಸ್‌.ಝಾ ಹಾಗೂ ಟಾಟಾ ಪ್ರಾಜೆಕ್ಟ್ಸ್‌ನ ಐವರು ಅಧಿಕಾರಿಗಳನನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಟಾಟಾ ಪ್ರಾಜೆಕ್ಟ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ದೇಶರಾಜ್‌ ಪಾಠಕ್, ಸಹಾಯಕ ಉಪಾಧ್ಯಕ್ಷ ಆರ್‌.ಎನ್‌.ಸಿಂಗ್‌ ಬಂಧಿತ ಪ್ರಮುಖ ಅಧಿಕಾರಿಗಳಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು 11 ಸ್ಥಳಗಳಲ್ಲಿ ಬುಧವಾರ ಶೋಧ ಕೈಗೊಂಡಿದ್ದರು. ಗುರುವಾರವೂ ಶೋಧ ನಡೆದಿದ್ದು, ಗುರುಗ್ರಾಮದಲ್ಲಿನ ಸ್ಥಳವೊಂದರಲ್ಲಿ ₹ 93 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಝಾ ಅವರು ಸದ್ಯ ಇಟಾನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಟಾಟಾ ಪ್ರಾಜೆಕ್ಟ್ಸ್‌ ಹಾಗೂ ಇತರ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಲಂಚ ತೆಗೆದುಕೊಂಡಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಝಾ ಅವರ ಮೇಲೆ ಸಿಬಿಐ ನಿಗಾ ಇರಿಸಿತ್ತು.

ದೇಶದ ಈಶಾನ್ಯ ರಾಜ್ಯಗಳಲ್ಲಿ ವಿದ್ಯುತ್‌ ಮೂಲಸೌಕರ್ಯಗಳನ್ನು ಸುಧಾರಿಸಲು ವಿಶ್ವಬ್ಯಾಂಕ್‌ ನೆರವಿನಲ್ಲಿ ಈಶಾನ್ಯ ಪ್ರದೇಶ ವಿದ್ಯುತ್‌ ವ್ಯವಸ್ಥೆ ಸುಧಾರಣಾ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮದಡಿ, ಟಾಟಾ ಪ್ರಾಜೆಕ್ಟ್ಸ್‌ಗೆ ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶದಲ್ಲಿನ ಕಾಮಗಾರಿಗಳ ಗುತ್ತಿಗೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT