ಸೋಮವಾರ, ಸೆಪ್ಟೆಂಬರ್ 26, 2022
24 °C

ಜಾನುವಾರು ಕಳ್ಳಸಾಗಣೆ ಪ್ರಕರಣ: ಟಿಎಂಸಿ ನಾಯಕ ಅನುಬ್ರತಾ ಮೊಂಡಲ್ ಬಂಧಿಸಿದ ಸಿಬಿಐ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಜಾನುವಾರು ಕಳ್ಳಸಾಗಣೆ ಪ್ರಕರಣದ ತನಿಖೆಗೆ ಸಹಕರಿಸದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ನಾಯಕ ಅನುಬ್ರತಾ ಮೊಂಡಲ್ ಅವರನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಅನುಬ್ರತಾ ಮೊಂಡಲ್‌ಗೆ ಸೂಚಿಸಲಾಗಿತ್ತು. ಆದರೆ, ಅವರು ಅನಾರೋಗ್ಯ ಕಾರಣ ನೀಡಿ ಎರಡು ಬಾರಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು.

ಅನುಬ್ರತಾ ಮೊಂಡಲ್‌ ಅವರು ಬಿರ್ಭುಮ್‌ನ ಟಿಎಂಸಿಯ ಜಿಲ್ಲಾಧ್ಯಕ್ಷರಾಗಿದ್ದಾರೆ. ಗುರುವಾರ ಬೆಳಿಗ್ಗೆ ಮೊಂಡಲ್‌ ಮನೆಗೆ ಆಗಮಿಸಿದ ಸಿಬಿಐ ಅಧಿಕಾರಿಗಳ ತಂಡ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿತು. ಬಳಿಕ ಅವರನ್ನು ಬಂಧಿಸಿದೆ. 

ಪ್ರಕರಣದ ತನಿಖೆಗೆ ಸಹಕರಿಸದಿದ್ದಕ್ಕಾಗಿ ಅನುಬ್ರತಾ ಮೊಂಡಲ್‌ ಅವರನ್ನು ಬಂಧಿಸಿದ್ದೇವೆ ಎಂದು ಸಿಬಿಐ ಅಧಿಕಾರಿಯೊಬ್ಬರು ‘ಪಿಟಿಐ’ಗೆ ತಿಳಿಸಿದ್ದಾರೆ.

ಸದ್ಯ ಮೊಂಡಲ್ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು