ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಧಿಸುವುದಾದರೆ ನನ್ನನ್ನು ಬಂಧಿಸಿ, ಅಧಿಕಾರಿಗಳನ್ನು ಸಾವಿಗೆ ದೂಡಬೇಡಿ: ಸಿಸೋಡಿಯಾ

Last Updated 5 ಸೆಪ್ಟೆಂಬರ್ 2022, 9:40 IST
ಅಕ್ಷರ ಗಾತ್ರ

ನವದೆಹಲಿ: ಸಿಬಿಐ ಅಧಿಕಾರಿಯೊಬ್ಬರ ಆತ್ಮಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆತ್ಮಹತ್ಯೆಗೆ ಶರಣಾದ ಸಿಬಿಐ ಅಧಿಕಾರಿ ಜಿತೇಂದ್ರ ಕುಮಾರ್ ಅವರು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದರು ಎಂದು ಸಿಸೋಡಿಯಾ ಹೇಳಿದ್ದಾರೆ.

ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸುವಂತೆ ಜಿತೇಂದ್ರ ಕುಮಾರ್‌ ಮೇಲೆ ಒತ್ತಡ ಹೇರಲಾಗಿತ್ತು. ಇದರಿಂದಾಗಿಯೇ ಅವರು ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ

‘ನೀವು(ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ) ಬಂಧಿಸಲು ಬಯಸಿದರೆ, ನನ್ನನ್ನು ಬಂಧಿಸಿ. ಅಧಿಕಾರಿಗಳನ್ನು ಆತ್ಮಹತ್ಯೆಗೆ ದೂಡಬೇಡಿ’ ಎಂದು ಸಿಸೋಡಿಯಾ ಹೇಳಿದರು.

ಅಬಕಾರಿ ನೀತಿ ಜಾರಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಪ್ರಕರಣದಲ್ಲಿ ಸಿಸೋಡಿಯಾ ಸೇರಿ 15 ಮಂದಿಯ ಮೇಲೆ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT