ಬುಧವಾರ, ಅಕ್ಟೋಬರ್ 28, 2020
28 °C

ವಿಶ್ವ ಭಾರತಿ ವಿವಿ ಮಾಜಿ ಕುಲಪತಿ ಸುಶಾಂತ್‌ ದತ್ತಗುಪ್ತ ವಿರುದ್ಧ ಎಫ್‌ಐಆರ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭ್ರಷ್ಟಾಚಾರದ ಆರೋಪದ ಮೇಲೆ ವಿಶ್ವ ಭಾರತಿ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಸುಶಾಂತ್‌ ದತ್ತಗುಪ್ತ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ. 

2012 ಮತ್ತು 2013 ರ ಅವಧಿಯಲ್ಲಿ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ  ವಿಶ್ವವಿದ್ಯಾಲಯದ ಆಡಳಿತ ಹಾಗೂ ಹಣಕಾಸು ವಿಚಾರಗಳಲ್ಲಿ ಅಕ್ರಮ ಎಸಗಿದ ಆರೋಪ ಅವರ ಮೇಲಿದೆ. ಎರಡು ವರ್ಷಗಳ ಸುದೀರ್ಘ ಪ್ರಾಥಮಿಕ ತನಿಖೆ (ಪಿಇ) ನಂತರ ಸಿಬಿಐ ಈ ಕ್ರಮ ತೆಗೆದುಕೊಂಡಿದೆ. 

ವಿಶ್ವಭಾರತಿಯಿಂದ ವೇತನ ಪಡೆಯುತ್ತಿದ್ದ ದತ್ತಗುಪ್ತ ಅವರು ಏಕಕಾಲಕ್ಕೆ ಜವಾಹರಲಾಲಾಲ್‌ ನೆಹರೂ  ವಿಶ್ವವಿದ್ಯಾಲಯದಿಂದ (ಜೆಎನ್‌ಯು) ನಿವೃತ್ತಿವೇತನವನ್ನೂ ಪಡೆಯುವ ಮೂಲಕ ಕಾನೂನು ಉಲ್ಲಂಘಿಸಿದ್ದಾರೆ ಎಂಬ ಆರೋಪಿಸಲಾಗಿದೆ.

ನಿಯಮಗಳನ್ನು ಗಾಳಿಗೆ ತೂರಿ ಇಲಾಖಾ ವಿಚಾರಣೆ ನಡೆಸಿದ್ದ ನಿವೃತ್ತ ನ್ಯಾಯಾಧೀಶರೊಬ್ಬರಿಗೆ ದತ್ತಗುಪ್ತ ₹ 5 ಲಕ್ಷ ಗೌರವಧನ ನೀಡಿರುವ ಮಾಹಿತಿಯೂ ತನಿಖೆಯಿಂದ ತಿಳಿದುಬಂದಿದೆ ಎಂದು ಸಿಬಿಐ ತಿಳಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು