ನವದೆಹಲಿ: ಜೆಇಇ ಮುಖ್ಯ ಪರೀಕ್ಷೆಯಲ್ಲಿ ನಡೆಸಿರುವ ಅಕ್ರಮಗಳ ಆರೋಪದ ಮೇಲೆ ಸಿಬಿಐ ಅಫಿನಿಟಿ ಎಜುಕೇಶನ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿದೆ.
ಈ ಸಂಬಂಧ ಗುರುವಾರ ದೆಹಲಿ, ಪುಣೆ, ಜೆಮ್‌ಶೆಡ್‌ಪುರ ಸೇರಿ ದೇಶದಾದ್ಯಂತ 20 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಅಫಿನಿಟಿ ಎಜುಕೇಶನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಿರ್ದೇಶಕರು, ಅವರ ಸಹದ್ಯೋಗಿಗಳು ಮತ್ತು ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾಗಿದ್ದ ಸಿಬ್ಬಂದಿ ಹಾಗೂ ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸಿಬಿಐ ವಕ್ತಾರ ಆರ್.ಸಿ. ಜೋಶಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.