ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹4.56 ಕೋಟಿ ಅವ್ಯವಹಾರ: ಐಒಬಿಯ ಆರು ಅಧಿಕಾರಿಗಳ ವಿರುದ್ಧ ಪ್ರಕರಣ

Last Updated 29 ಜನವರಿ 2021, 11:43 IST
ಅಕ್ಷರ ಗಾತ್ರ

ನವದೆಹಲಿ: ‘₹4.56 ಕೋಟಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದ ಮೇಲೆ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ನ ಆರು ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಇವರು ಆಂಧ್ರಪ್ರದೇಶದ ವಿಜಯವಾಡ ಹಾಗೂ ಗುಂಟೂರಿನವರು’ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ’ ಎಂದೂ ಅವರು ಹೇಳಿದ್ದಾರೆ.

‘ಆರೋಗ್ಯ ಭದ್ರತಾ ಯೋಜನೆಯ ಕಾರ್ಯದರ್ಶಿ ಗುಂಟೂರು ಜಿಲ್ಲೆಯ ಮಂಗಳಗಿರಿಯಲ್ಲಿರುವ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ನ ಶಾಖೆಯಲ್ಲಿ ಉಳಿತಾಯ ಖಾತೆಗಳನ್ನು ತೆರೆದಿದ್ದರು. ಆ ಖಾತೆಗಳಿಗೆ ತಲಾ ₹ 90 ಲಕ್ಷ ಜಮೆ ಮಾಡಿದ್ದರು. ಮತ್ತೊಂದು ಖಾತೆಗೆ ₹68.84 ಲಕ್ಷ ಹಾಕಿದ್ದರು. ಈ ಆರು ಮಂದಿ ಅಧಿಕಾರಿಗಳು ಖಾತೆದಾರರ ಅನುಮತಿಯಿಲ್ಲದೆಯೇ ಅಷ್ಟೂ ಹಣವನ್ನು ಅನಾಮಧೇಯ ಖಾತೆಗಳಿಗೆ ವರ್ಗಾಯಿಸಿದ್ದರು. ಬಳಿಕ ಕಾರ್ಯದರ್ಶಿಯ ಗಮನಕ್ಕೂ ತರದೆ ಅವರ ನಾಲ್ಕು ಖಾತೆಗಳನ್ನು ರದ್ದುಗೊಳಿಸಿದ್ದರು’ ಎಂದು ಸಿಬಿಐ ವಕ್ತಾರ ಆರ್‌.ಸಿ.ಜೋಷಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT