ಭಾನುವಾರ, ಮೇ 9, 2021
28 °C

ಬ್ಯಾಂಕುಗಳಿಗೆ ವಂಚನೆ: ಬೆಂಗಳೂರು ಸೇರಿ 100 ಸ್ಥಳಗಳಲ್ಲಿ ಸಿಬಿಐ ಶೋಧ

ಪಿಟಿಐ‌ Updated:

ಅಕ್ಷರ ಗಾತ್ರ : | |

ನವದೆಹಲಿ: ವಿವಿಧ ಬ್ಯಾಂಕುಗಳಿಗೆ ವಂಚಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆಂಗಳೂರು, ಬಳ್ಳಾರಿ ಸೇರಿದಂತೆ ದೇಶದ 100 ಸ್ಥಳಗಳಲ್ಲಿ ಸಿಬಿಐ ಗುರುವಾರ ಶೋಧಕಾರ್ಯ ಕೈಗೊಂಡಿತ್ತು.

₹ 3,700 ಕೋಟಿಗೂ ಅಧಿಕ ಮೊತ್ತದ ಅವ್ಯವಹಾರಕ್ಕೆ ಸಂಬಂಧಿಸಿದಂತೆ 11 ರಾಜ್ಯಗಳಲ್ಲಿ ಒಟ್ಟು 30 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.

ವಂಚನೆ ಕುರಿತು ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ, ಬ್ಯಾಂಕ್‌ ಆಫ್‌ ಬರೋಡ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌, ಎಸ್‌ಬಿಐ, ಐಡಿಬಿಐ, ಕೆನರಾ ಬ್ಯಾಂಕ್‌, ಇಂಡಿಯನ್‌ ಬ್ಯಾಂಕ್‌ ಹಾಗೂ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ನೀಡಿರುವ ದೂರುಗಳ ಆಧಾರದ ಮೇಲೆ ಶೋಧ ಕಾರ್ಯ ಕೈಗೊಳ್ಳಲಾಗಿತ್ತು ಎಂದು ಸಿಬಿಐ ವಕ್ತಾರ ಆರ್‌.ಸಿ.ಜೋಶಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು