ಮಾಜಿ ಸಚಿವರ ಕುಟುಂಬ ಶಿಕ್ಷಣ ಸಂಸ್ಥೆಯ ವಿರುದ್ಧ ಭ್ರಷ್ಟಾಚಾರ ಪ್ರಕರಣ

ಜಮ್ಮು: ನಂಬಿಕೆ ದ್ರೋಹ ಮತ್ತು ಭ್ರಷ್ಟಾಚಾರ ಆರೋಪದಡಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಲಾಲ್‌ಸಿಂಗ್ ಕುಟುಂಬದವರು ಸದಸ್ಯರಾಗಿರುವ ಕಥುವಾ ಮೂಲದ ಶಿಕ್ಷಣ ಸಂಸ್ಥೆಯ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
ಮಾಜಿ ಸಚಿವರ ಕುಟುಂಬದ ಸದಸ್ಯರಿರುವ ಆರ್‌ಬಿ ಶಿಕ್ಷಣ ಸಂಸ್ಥೆಯ ವಿರುದ್ಧ ಭ್ರಷ್ಟಚಾರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಂಸ್ಥೆಯ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಲಾಲ್‌ಸಿಂಗ್ ಪತ್ನಿ ಮತ್ತು ಅವರ ಮಗ ಸೇರಿದಂತೆ ಇತರೆ ಸರ್ಕಾರಿ ಅಧಿಕಾರಿಗಳ ಹೆಸರಿದೆ. ಅಲ್ಲದೆ ಹಗರಣ ನಡೆದ ವೇಳೆಯಲ್ಲಿ ಅಧಿಕಾರದಲಿದ್ದ ಕಥುವಾ ನಗರದ ಉಪ ಆಯುಕ್ತರು ಹೆಸರೂ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಈ ಪ್ರಕರಣದ ಸಂಬಂಧ ಸಿಬಿಐ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಜಮ್ಮುವಿನ ಮೂರು ಮತ್ತು ಕಠುವಾ ಜಿಲ್ಲೆಯ 9 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.