ಬುಧವಾರ, ಮಾರ್ಚ್ 22, 2023
33 °C

ಲೈಂಗಿಕ ಕಿರುಕುಳ ಆರೋಪ: ವೇಣುಗೋಪಾಲ್‌ ಆರೋಪಮುಕ್ತಗೊಳಿಸಿದ ಸಿಬಿಐ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಸೌರಫಲಕ ಹಗರಣದಲ್ಲಿ ಆರೋಪಿಯಾಗಿರುವ ಕೇರಳದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿರುವ ಪ್ರಕಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರನ್ನು ಸಿಬಿಐ ಆರೋಪಮುಕ್ತಗೊಳಿಸಿದೆ.

ಪ್ರಕರಣದ ತನಿಖೆಯ ಅಂತಿಮ ವರದಿಯನ್ನು ತಿರುವನಂತಪುರದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಸಿಬಿಐ ಶುಕ್ರವಾರ ಸಲ್ಲಿಸಿದೆ.

ವೇಣುಗೋಪಾಲ್‌ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯ ಮಾಡಿರುವ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಸಿಬಿಐ ವರದಿಯಲ್ಲಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಈ ಮಹಿಳೆ ಹಿಂದೆಯೂ ಕಾಂಗ್ರೆಸ್‌ನ ಹಲವು ಮುಖಂಡರ ವಿರುದ್ಧ ಇದೇ ರೀತಿಯ ಆರೋಪ ಮಾಡಿದ್ದರು. ಆ ಪ್ರಕರಣಗಳಲ್ಲಿ ಅವರನ್ನು ಸಿಬಿಐ ಆರೋಪಮುಕ್ತಗೊಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು