ಮಂಗಳವಾರ, ಸೆಪ್ಟೆಂಬರ್ 29, 2020
23 °C
ನ್ಯಾಯಾಲಯದಲ್ಲಿ ಹಾಜರಿರುವಂತೆ ಆರೋಪಿಗಳಿಗೆ ವಿಶೇಷ ಸಿಬಿಐ ನ್ಯಾಯಾಲಯ ನಿರ್ದೇಶನ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಸೆಪ್ಟೆಂಬರ್‌ 30ರಂದು ತೀರ್ಪು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸಿಬಿಐ ನ್ಯಾಯಾಲಯ ಸೆಪ್ಟೆಂಬರ್‌ 30ರಂದು ತೀರ್ಪು ನೀಡಲಿದೆ.

ತೀರ್ಪು ನೀಡುವ ದಿನ ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾಯಾಧೀಶ ಎಸ್‌.ಕೆ. ಯಾದವ್‌ ಸೂಚಿಸಿದ್ದಾರೆ.

ಬಿಜೆಪಿಯ ಪ್ರಮುಖ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಎಂ.ಎಂ. ಜೋಶಿ, ಕಲ್ಯಾಣ್‌ ಸಿಂಗ್‌, ಉಮಾ ಭಾರತಿ ಮತ್ತು ವಿನಯ್‌ ಕಟಿಯಾರ್‌ ಸೇರಿದಂತೆ 32 ಆರೋಪಿಗಳು ಇದ್ದಾರೆ.

ಸೆಪ್ಟೆಂಬರ್‌ 1ರಂದು ವಾದ ಮತ್ತು ಪ್ರತಿವಾದ ಮುಗಿದಿದ್ದು, ವಿಶೇಷ ನ್ಯಾಯಾಧೀಶರು ತೀರ್ಪು ಬರೆಯುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ ಎಂದು ಸಿಬಿಐ ಪರ ವಕೀಲ ಲಲಿತ್‌ ಸಿಂಗ್‌ ತಿಳಿಸಿದ್ದಾರೆ.

351 ಸಾಕ್ಷಿದಾರರನ್ನು ಹಾಗೂ 600 ದಾಖಲಾತಿ ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದೆ ಸಿಬಿಐ ಹಾಜರುಪಡಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು