ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಡಿಯೊ ಹಂಚಿಕೆ: 19 ರಾಜ್ಯಗಳಲ್ಲಿ ಸಿಬಿಐ ದಾಳಿ

Last Updated 24 ಸೆಪ್ಟೆಂಬರ್ 2022, 7:48 IST
ಅಕ್ಷರ ಗಾತ್ರ

ನವದೆಹಲಿ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ(ಸಿಎಸ್‌ಎಎಂ) ಸಂಬಂಧಿಸಿದ ಆಡಿಯೊ, ವಿಡಿಯೊಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪದಡಿ ದೇಶದ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 56 ಸ್ಥಳಗಳ ಸಿಬಿಐ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ. ಆಪರೇಷನ್ 'ಮೇಘ ಚಕ್ರ'ದ ಭಾಗವಾಗಿ ಈ ಶೋಧ ನಡೆಸಲಾಗುತ್ತಿದೆ.

ಕ್ಲೌಡ್ ಸ್ಟೋರೇಜ್ ಬಳಸಿಕೊಂಡು ಇಂಟರ್ನೆಟ್‌ನಲ್ಲಿ ಸಿಎಸ್‌ಎಎಂ ದಂಧೆ ನಡೆಸುತ್ತಿದ್ದ ಪೆಡ್ಲರ್‌ಗಳ ವಿರುದ್ಧ ಕಳೆದ ವರ್ಷ ನಡೆದ ಆಪರೇಷನ್ ಕಾರ್ಬನ್ ದಾಳಿ ಸಮಯದಲ್ಲಿ ಪಡೆದ ಗುಪ್ತಚರ ಮಾಹಿತಿ ಮತ್ತು ಸಿಂಗಾಪುರದ ಇಂಟರ್‌ಪೋಲ್ ಮಾಹಿತಿ ಆಧರಿಸಿ ಈ ದಾಳಿ ನಡೆದಿದೆ.

ಅಪ್ರಾಪ್ತರ ಲೈಂಗಿಕ ಚಟುವಟಿಕೆಗಳ ಆಡಿಯೊ-ದೃಶ್ಯಗಳನ್ನು ಪ್ರಸಾರ ಮಾಡಲು ಪೆಡ್ಲರ್‌ಗಳು ಬಳಸುವ ಕ್ಲೌಡ್ ಸ್ಟೋರೇಜ್ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ.

ದೇಶದಾದ್ಯಂತ ಇರುವ ಸಿಎಸ್‌ಎಎಂ ಪೆಡ್ಲರ್‌ಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT