ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಇಇ ಮೇನ್ಸ್‌ ಅಕ್ರಮ: ರಷ್ಯಾ ನಾಗರಿಕ ವಶಕ್ಕೆ

Last Updated 3 ಅಕ್ಟೋಬರ್ 2022, 15:58 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜೆಇಇ ಮೇನ್ಸ್‌ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಭಾರತಕ್ಕೆ ಬಂದಿಳಿದ ರಷ್ಯಾದ ನಾಗರಿಕರೊಬ್ಬರನ್ನು ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಈ ವ್ಯಕ್ತಿಯ ಕುರಿತು ಸಿಬಿಐ ಲುಕ್‌ ಔಟ್‌ ನೋಟಿಸ್‌ ಹೊರಡಿಸಿತ್ತು. ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಈತನೇ ಮುಖ್ಯ ಹ್ಯಾಕರ್‌ ಆಗಿದ್ದರು ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದರು.

ವಶಕ್ಕೆ ಪಡೆದ ನಂತರ ರಷ್ಯಾ ನಾಗರಿಕನನ್ನು ತನಿಖೆಗೆ ಒಳಪಡಿಸಲಾಗಿದೆ. ಈತನನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT