ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ.ಡಿ ಅನಗತ್ಯವಾಗಿ ತೊಂದರೆ ಕೊಡುತ್ತಿದೆ: ಅರವಿಂದ ಕೇಜ್ರಿವಾಲ್

Last Updated 16 ಸೆಪ್ಟೆಂಬರ್ 2022, 9:02 IST
ಅಕ್ಷರ ಗಾತ್ರ

ನವದೆಹಲಿ: ಜಾರಿ ನಿರ್ದೇಶನಾಲಯವು (ಇ.ಡಿ) ಅನಗತ್ಯವಾಗಿ ತೊಂದರೆ ಕೊಡುತ್ತಿದ್ದು, ಈ ರೀತಿಯಿಂದ ದೇಶವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ 2021-22ರಲ್ಲಿ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಇ.ಡಿ ದೇಶದಾದ್ಯಂತ 40 ಸ್ಥಳಗಳಲ್ಲಿ ದಾಳಿ ನಡೆಸಿದೆ.

ಪ್ರತಿಕಾಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಕೇಜ್ರಿವಾಲ್, ಬಿಜೆಪಿ ಆರೋಪ ಮಾಡುತ್ತಿರುವ ಅಬಕಾರಿ ಹಗರಣ ಏನೆಂಬುದೇ ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕರೊಬ್ಬರು ₹8000 ಕೋಟಿ ಹಗರಣ ನಡೆದಿದೆ ಎಂದು ಆಪಾದಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ₹144 ಕೋಟಿ ಹಗರಣ ಎಂದು ಹೇಳುತ್ತಾರೆ. ಸಿಬಿಐ ಎಫ್‌ಐಆರ್‌ನಲ್ಲಿ ₹1 ಕೋಟಿ ಹಗರಣ ಎಂದು ಉಲ್ಲೇಖವಾಗಿದೆ. ನಿಜಕ್ಕೂ ಮದ್ಯದ ಹಗರಣ ಏನೆಂಬುದೇ ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT