ಮಂಗಳವಾರ, ಜನವರಿ 31, 2023
19 °C

ಶಾಸಕರು, ಸಂಸದರ ವಿರುದ್ಧ 56 ಪ್ರಕರಣ ದಾಖಲಿಸಿದ ಸಿಬಿಐ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಶಾಸಕರು ಮತ್ತು ಸಂಸದರ ವಿರುದ್ಧ ಸಿಬಿಐ 56 ಪ್ರಕರಣಗಳನ್ನು ದಾಖಲಿಸಿದ್ದು, 22 ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಿದೆ ಎಂದು ಬುಧವಾರ ಲೋಕಸಭೆಗೆ ಮಾಹಿತಿ ನೀಡಲಾಯಿತು. 

ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಶಾಸಕರ ವಿರುದ್ಧ ದಾಖಲಾದ ಪ್ರಕರಣಗಳ ರಾಜ್ಯವಾರು ಅಂಕಿ ಅಂಶಗಳನ್ನು ನೀಡಿದರು. 2017 ಮತ್ತು 2022 ರ ನಡುವೆ ಆಂಧ್ರಪ್ರದೇಶದಲ್ಲಿ 10 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.

ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ತಲಾ ಆರು, ಪಶ್ಚಿಮ ಬಂಗಾಳ ಮತ್ತು ಅರುಣಾಚಲ ಪ್ರದೇಶದಲ್ಲಿ ತಲಾ ಐದು, ತಮಿಳುನಾಡಿನಲ್ಲಿ ನಾಲ್ಕು, ಮಣಿಪುರ, ದೆಹಲಿ ಮತ್ತು ಬಿಹಾರದಲ್ಲಿ ತಲಾ ಮೂರು, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕದಲ್ಲಿ ತಲಾ ಎರಡು ಮತ್ತು ಹರಿಯಾಣ, ಛತ್ತೀಸಗಢ, ಮೇಘಾಲಯ, ಉತ್ತರಾಖಂಡ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಲಕ್ಷದ್ವೀಪದಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು