ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

100 ಕೋಟಿ ಲಂಚ ಆರೋಪ| ಅನಿಲ್‌ ದೇಶಮುಖ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ

Last Updated 2 ಜೂನ್ 2022, 14:40 IST
ಅಕ್ಷರ ಗಾತ್ರ

ನವದೆಹಲಿ: ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ಮಾಡಿರುವ ₹100 ಕೋಟಿ ಲಂಚದ ಆರೋಪದ ತನಿಖೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಇತರರ ವಿರುದ್ಧ ಸಿಬಿಐ ಗುರುವಾರ ಚಾರ್ಜ್‌ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಜಾಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರು ಮಾಫಿಸಾಕ್ಷಿಯಾಗಲು ಮತ್ತು ಪ್ರಕರಣದಲ್ಲಿ ಕ್ಷಮೆ ಕೋರಲು ಸಲ್ಲಿಸಿದ ಮನವಿಯನ್ನು ಮುಂಬೈನ ವಿಶೇಷ ನ್ಯಾಯಾಲಯವು ಅನುಮತಿಸಿದ ಒಂದು ದಿನದ ನಂತರ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, ವಾಜೆ ಅವರು ತಮ್ಮ ಬಂಧನದ ಮೊದಲು ಮತ್ತು ನಂತರ ಸಿಬಿಐಗೆ ಸಹಕರಿಸಿದ್ದಾರೆ ಎಂದು ಹೇಳಲಾಗಿದೆ. ಅವರ ತಪ್ಪೊಪ್ಪಿಗೆ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ದೇಶಮುಖ್ ಮತ್ತು ಅವರ ವೈಯಕ್ತಿಕ ಸಿಬ್ಬಂದಿ ಸಂಜೀವ್ ಪಲಾಂಡೆ ಹಾಗೂ ಕುಂದನ್ ಶಿಂಧೆ ವಿರುದ್ಧ ಸಿಬಿಐ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ತನ್ನ ಚಾರ್ಜ್‌ಶೀಟ್ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT