ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕಾರ್‌ ಪಟೇಲ್‌ ವಿರುದ್ಧ ಕಾನೂನುಕ್ರಮ: ಸಿಬಿಐಗೆ ಕೇಂದ್ರ ಸರ್ಕಾರ ಅನುಮತಿ

Last Updated 12 ಏಪ್ರಿಲ್ 2022, 12:29 IST
ಅಕ್ಷರ ಗಾತ್ರ

ನವದೆಹಲಿ: ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಇಂಡಿಯಾ ಹಾಗೂ ಸಂಸ್ಥೆಯ ಮಾಜಿ ಅಧ್ಯಕ್ಷ ಆಕಾರ್‌ ಪಟೇಲ್ ವಿರುದ್ಧ ಕಾನೂನು ಕ್ರಮ ಜರುಗಿಸಲುಸಿಬಿಐಗೆ ಕೇಂದ್ರ ಸರ್ಕಾರ ಮಂಗಳವಾರ ಒಪ್ಪಿಗೆ ನೀಡಿದೆ.

ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಇಂಡಿಯಾ ಹಾಗೂ ಆಕಾರ್‌ ಪಟೇಲ್‌ ವಿರುದ್ಧ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘಿಸಿದ ಆರೋಪಗಳಿದ್ದು, ಈ ಸಂಬಂಧ ಸಿಬಿಐ 2021ರ ಡಿಸೆಂಬರ್ 31ರಂದು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಆದರೆ, ಸಂಸ್ಥೆ ವಿರುದ್ಧ ಕಾನೂನುಕ್ರಮ ಜರುಗಿಸಲು ಎಫ್‌ಸಿಆರ್‌ಎ ಸೆಕ್ಷನ್‌ 40ರ ಪ್ರಕಾರ ಕೇಂದ್ರದ ಅನುಮತಿ ಪಡೆಯುವುದು ಕಡ್ಡಾಯ. ಹಾಗಾಗಿ, ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಸಿಬಿಐ ಮನವಿ ಸಲ್ಲಿಸಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿರುವ ಆರೋಪಗಳ ಬಗ್ಗೆ ನ್ಯಾಯಾಲಯ ಏಪ್ರಿಲ್ 18ರಂದು ವಿಚಾರಣೆ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT