ಭಾನುವಾರ, ಆಗಸ್ಟ್ 14, 2022
22 °C

ಕಲ್ಲಿದ್ದಲು ಅಕ್ರಮ ವಹಿವಾಟು: ಸಿಬಿಐನಿಂದ ಅನುಪ್‌ ವಿರುದ್ಧ ಲುಕ್‌ಔಟ್ ನೋಟಿಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಅಕ್ರಮ ಕಲ್ಲಿದ್ದಲು ವಹಿವಾಟು ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಅನುಪ್ ಮಾಜಿ ಅಲಿಯಾಸ್ ಲಾಲಾ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ತಲೆಮರೆಸಿಕೊಂಡಿರುವ ಅವರ ನೆಲೆ ಪತ್ತೆಗೆ ನೋಟಿಸ್‌ ಜಾರಿ ಮಾಡಲಾಗಿದೆ. ಪ್ರಕರಣ ಸಂಬಂಧ ಅವರನ್ನು ತನಿಖೆಗೆ ಒಳಪಡಿಸುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಕಲ್ಲಿದ್ದಲ್ಲು ಅಕ್ರಮ ವಹಿವಾಟು ಕುರಿತಂತೆ ಸಿಬಿಐ ನವೆಂಬರ್ 28ರಂದು ಪಶ್ಚಿಮ ಬಂಗಾಳದಲ್ಲಿ ವಿವಿಧ 45 ಕಡೆ ದಾಳಿ ನಡೆಸಿತ್ತು. ಜಾರ್ಖಂಡ್, ಬಿಹಾರ, ಉತ್ತರಪ್ರದೇಶದಲ್ಲಿ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್‌ಗೆ ಸೇರಿದ ವಿವಿಧ ತಾಣಗಳಲ್ಲಿಯೂ ದಾಳಿ ನಡೆದಿತ್ತು. ಈ ಪ್ರಕರಣ ಕುರಿತಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ವಕ್ತಾರರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.