ಶುಕ್ರವಾರ, ನವೆಂಬರ್ 27, 2020
19 °C

ಹಾಥರಸ್‌ ಪ್ರಕರಣದ ತನಿಖೆಯ ಮೇಲ್ವಿಚಾರಣೆ ಅಲಹಾಬಾದ್‌ ಹೈಕೋರ್ಟ್‌ಗೆ: ಸುಪ್ರೀಂ‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿರುವ ಹಾಥರಸ್‌ ದಲಿತ ಮಹಿಳೆ ಅತ್ಯಾಚಾರ ಮತ್ತು ಸಾವಿನ ಪ್ರಕರಣದ ತನಿಖೆಯನ್ನು ಅಲಹಾಬಾದ್‌ ಹೈಕೋರ್ಟ್‌ ಮೇಲ್ವಿಚಾರಣೆ ನಡೆಸಲಿದೆ‘ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

‘ತನಿಖೆಯ ಮೇಲ್ವಿಚಾರಣೆ, ಸಂತ್ರಸ್ತೆಯ ಕುಟುಂಬಕ್ಕೆ ಭದ್ರತೆ ಒದಗಿಸುವುದು ಮತ್ತು ಅವರ ಯೋಗಕ್ಷೇಮ ನೋಡಿಕೊಳ್ಳುವುದು ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನೂ ಅಲಹಬಾದ್ ಹೈಕೋರ್ಟ್‌ ಪರಿಗಣಿಸಲಿದೆ‘ ಎಂದು ನ್ಯಾಯಾಲಯ ತಿಳಿಸಿದೆ.

ಸಿಬಿಐ ತನಿಖೆ ಪೂರ್ಣಗೊಂಡ ನಂತರ ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ವರ್ಗಾವಣೆ ಮಾಡುವ ಮನವಿಯನ್ನು ಪರಿಗಣಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬಡೆ ನೇತೃತ್ವದ ನ್ಯಾಯಪೀಠ ಹೇಳಿದೆ.

ಉತ್ತರ ಪ್ರದೇಶದಲ್ಲಿ ನ್ಯಾಯಯುತ ವಿಚಾರಣೆ ಸಾಧ್ಯವಿಲ್ಲ ಎಂದು ಹೋರಾಟಗಾರರು ಮತ್ತು ವಕೀಲರ ತಂಡ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿ ಆದೇಶಿಸಿರುವ ನ್ಯಾಯಪೀಠ, ‘ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖಾ ವರದಿಯನ್ನು ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಲಿದೆ‘ ಎಂದು ತಿಳಿಸಿದೆ.

ಉತ್ತರ ಪ್ರದೇಶ ಸರ್ಕಾರದ ಮನವಿಯನ್ನು ಪರಿಗಣಿಸಿದ ನ್ಯಾಯಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಬಾಕಿ ಇರುವ ಒಂದು ಆದೇಶದಲ್ಲಿ ಸಂತ್ರಸ್ತೆಯ ಹೆಸರನ್ನು ತೆಗೆದು ಹಾಕುವಂತೆ ಕೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು