ಭಾನುವಾರ, ಜೂನ್ 26, 2022
25 °C

ವೀಸಾಕ್ಕಾಗಿ ಲಂಚ ಪ್ರಕರಣ: ಸತತ ಮೂರನೇ ದಿನ ಸಿಬಿಐಯಿಂದ ಕಾರ್ತಿ ಚಿದಂಬರಂ ವಿಚಾರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಚೀನಾದ 263 ಮಂದಿಗೆ ವೀಸಾ ಕೊಡಿಸಲು ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ, ಸಂಸದ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಸತತ ಮೂರನೇ ದಿನವೂ ವಿಚಾರಣೆಗೆ ಒಳಪಡಿಸಿದರು.

ಶನಿವಾರ ಬೆಳಿಗ್ಗೆಯೇ ಕಾರ್ತಿ ಚಿದಂಬರಂ ಅವರು ಸಿಬಿಐ ಪ್ರಧಾನ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾದರು. ವಿಚಾರಣೆ ಸಂಜೆಯವರೆಗೆ ಮುಂದುರಿಯುವ ಸಾಧ್ಯತೆ ಇದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ವೀಸಾ ಹಗರಣ: ಕಾರ್ತಿ ಚಿದಂಬರಂ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

ಕಾರ್ತಿ ಅವರು 2011ರಲ್ಲಿ ಅವರ ತಂದೆ ಚಿದಂಬರಂ ಗೃಹ ಸಚಿವರಾಗಿದ್ದ ಅವಧಿಯಲ್ಲಿ ಚೀನಾದ 263 ಮಂದಿಗೆ ವೀಸಾ ಕೊಡಿಸಿದ್ದರು. ಇದರಲ್ಲಿ ಕಾರ್ತಿ ಮತ್ತು ಅವರ ಆಪ್ತ ಎಸ್.ಭಾಸ್ಕರ ರಾಮನ್ ₹50 ಲಕ್ಷ ಲಂಚ ಪಡೆದಿದ್ದಾರೆ ಎಂಬ ಆರೋಪವಿದ್ದು, ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು.

ಕಾರ್ತಿ ಚಿದಂಬರಂ ವಿರುದ್ಧ ರಾಜಕೀಯ ಪ್ರೇರಿತವಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು