ಉದ್ಯೋಗಕ್ಕಾಗಿ ನಿವೇಶನ ಹಗರಣ: ತೇಜಸ್ವಿ ಯಾದವ್ ಆಪ್ತ ಕಾರ್ಯದರ್ಶಿ ವಿಚಾರಣೆ

ನವದೆಹಲಿ: ಉದ್ಯೋಗಕ್ಕಾಗಿ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಆಪ್ತ ಕಾರ್ಯದರ್ಶಿ ಸಂಜಯ್ ಯಾದವ್ ಅವರನ್ನು ಕೇಂದ್ರಿಯ ತನಿಖಾ ದಳ (ಸಿಬಿಐ) ವಿಚಾರಣೆಗೆ ಒಳಪಡಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ವಿಚಾರಣೆಗೆ ಹಾಜರಾಗುವಂತೆ ಸಂಜಯ್ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು.
ಈ ಹಗರಣ ಸಂಬಂಧ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್, ಅವರ ಪತ್ನಿ ರಾಬ್ಡಿ ದೇವಿ ವಿರುದ್ಧ ಸಿಬಿಐ ಶುಕ್ರವಾರ ಚಾರ್ಜ್‌ಶೀಟ್ ಸಲ್ಲಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.