ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಹಗರಣದಲ್ಲಿ ಸಿಬಿಐನಿಂದ ಅಭಿಷೇಕ್ ಬ್ಯಾನರ್ಜಿ ಪತ್ನಿ ವಿಚಾರಣೆ

Last Updated 14 ಜೂನ್ 2022, 11:22 IST
ಅಕ್ಷರ ಗಾತ್ರ

ಕೋಲ್ಕತ್ತ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ.

ಮಹಿಳಾ ಅಧಿಕಾರಿ ಸೇರಿದಂತೆ 8 ಮಂದಿ ಸದಸ್ಯರಿದ್ದ ತಂಡವು, ಮಂಗಳವಾರ ಬೆಳಗ್ಗೆ 11.30ರ ವೇಳೆಗೆ ಬ್ಯಾನರ್ಜಿ ಅವರ ನಿವಾಸವಿರುವ ಹರೀಶ್ ಮುಖರ್ಜಿ ರಸ್ತೆಯಲ್ಲಿರುವ ಶಾಂತಿನಿಕೇತನ್‌ಗೆ ತೆರಳಿ, ರುಜಿರಾ ಅವರನ್ನು ವಿಚಾರಣೆ ನಡೆಸಿತು. ಈ ಪ್ರಕರಣದಲ್ಲಿ ರುಜಿರಾ ಅವರನ್ನು ಸಿಬಿಐ 2ನೇ ಬಾರಿಗೆ ವಿಚಾರಣೆ ನಡೆಸಿದಂತಾಗಿದೆ.

ಕಳೆದ ವರ್ಷದ ಫೆಬ್ರುವರಿಯಲ್ಲಿ ನಡೆದ ವಿಚಾರಣೆ ವೇಳೆ ರುಜಿರಾ ಬ್ಯಾನರ್ಜಿ ಅವರು ನೀಡಿದ ಉತ್ತರಗಳು ತೃಪ್ತಿದಾಯಕವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT