ಶನಿವಾರ, ಅಕ್ಟೋಬರ್ 1, 2022
23 °C

ಕೇಜ್ರಿವಾಲ್, ಸಿಸೋಡಿಯಾ ಅವರ ನಿಜ ಬಣ್ಣ ಬಯಲಾಗಿದೆ: ಕೇಂದ್ರ ಸಚಿವ ಅನುರಾಗ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಿಜವಾದ ಬಣ್ಣ ಬಯಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಶುಕ್ರವಾರ ತಿರುಗೇಟು ನೀಡಿದ್ದಾರೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರದಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆಗೆ ಸಿಬಿಐ ದಾಳಿ ನಡೆಸಿದೆ.

ಇದನ್ನೂ ಓದಿ: 

ಈ ಕುರಿತು ಪ್ರತಿಕ್ರಿಯಿಸಿರುವ ಅನುರಾಗ್ ಠಾಕೂರ್, ಜನ ಸಾಮಾನ್ಯರನ್ನು ಮೂರ್ಖರೆಂದು ಭಾವಿಸಬೇಡಿ. ಭಷ್ಟಾಚಾರಿಗಳು ಪ್ರಮಾಣಿಕರಾಗಿ ಇರಲು ಎಷ್ಟೇ ಪ್ರಯತ್ನಿಸಿದರೂ ಅವರು ಭ್ರಷ್ಟರಾಗಿಯೇ ಉಳಿಯುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಮ್ ಆದ್ಮಿ ಪಕ್ಷದ ಭ್ರಷ್ಟಾಚಾರವು ಒಂದಲ್ಲ, ಹಲವು ಬಾರಿ ಬಯಲಿಗೆ ಬಂದಿದೆ. ಶಿಕ್ಷಣ ಅಲ್ಲ ಅಬಕಾರಿ ನೀತಿಯಲ್ಲಿ ಆದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಯುತ್ತಿದೆ. ಹಾಗೊಂದು ವೇಳೆ ಅಬಕಾರಿ ನೀತಿಯಲ್ಲಿ ಸಮಸ್ಯೆ ಇಲ್ಲದಿದ್ದಲ್ಲಿ ಯಾತಕ್ಕಾಗಿ ವಾಪಾಸ್ ಪಡೆದರು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: 

ಕೇಜ್ರಿವಾಲ್ ರಾಷ್ಟ್ರದ ಹೆಸರಲ್ಲಿ ಸಂದೇಶ ನೀಡುವುದನ್ನು ನಿಲ್ಲಿಸಬೇಕು. ಸಚಿವ ಸತ್ಯೇಂದ್ರ ಜೈನ್ ಜೈಲಿಗೆ ಹೋದಾಗಲೂ ಅವರನ್ನು ವಜಾ ಮಾಡಲಿಲ್ಲ. ದೆಹಲಿಯ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು