ಭಾನುವಾರ, ಜೂನ್ 26, 2022
27 °C

ಭ್ರಷ್ಟಾಚಾರ: ಲಾಲು ಪ್ರಸಾದ್ ವಿರುದ್ಧ ಹೊಸ ಪ್ರಕರಣ, 17 ಸ್ಥಳಗಳಲ್ಲಿ ಸಿಬಿಐ ಶೋಧ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಿಹಾರ ಆರ್‌ಜೆಡಿ ನಾಯಕ, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್‌ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಲಾಲು ಪ್ರಸಾದ್ ಯಾದವ್‌ಗೆ ಸಂಬಂಧಿಸಿದ 17ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. 

ರೈಲ್ವೆ ಇಲಾಖೆಯ ಉದ್ಯೋಗಕ್ಕಾಗಿ ಆಕಾಂಕ್ಷಿಗಳಿಂದ ನಿರ್ದಿಷ್ಟ ಭೂಮಿ ಅಥವಾ ನಿವೇಶನಗಳನ್ನು ಪಡೆಯಲಾಗಿದೆ ಎಂಬುದು ಲಾಲು ಪ್ರಸಾದ್‌ ವಿರುದ್ಧದ ಹೊಸ ಆರೋಪವಾಗಿದೆ. 

ಹೊಸ ಪ್ರಕರಣ ಸಂಬಂಧ ಲಾಲು ಪ್ರಸಾದ್ ಹಾಗೂ ಕುಟುಂಬಸ್ಥರಿಗೆ ಸಂಬಂಧಿಸಿದ ಬಿಹಾರ, ದೆಹಲಿಯ ವಿವಿಧ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. 

ಮೇವು ಹಗರಣದಲ್ಲಿ ಲಾಲು ಪ್ರಸಾದ್‌ ಇತ್ತೀಚೆಗಷ್ಟೇ ಜಾಮೀನು ಪಡೆದಿದ್ದರು. 

ಲಾಲು ಪ್ರಸಾದ್ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ಎಸೆಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಓದಿ... ಗಂಡು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು