ಮಹಂತ ಗಿರಿ ಸಾವು: ಎಫ್‌ಐಆರ್ ದಾಖಲಿಸಿದ ಸಿಬಿಐ

ನವದೆಹಲಿ: ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ಮಹಂತ ನರೇಂದ್ರ ಗಿರಿ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಎಫ್‌ಐಆರ್ ದಾಖಿಲಿಸಿದೆ. ಎಫ್‌ಐಆರ್‌ನಲ್ಲಿ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಕುಮ್ಮಕ್ಕು) ಉಲ್ಲೇಖಿಸಲಾಗಿದೆ.
ಸ್ವಾಮೀಜಿ ಮೃತದೇಹವು ಅಲಹಾಬಾದ್‌ನ ಬಘಂಬರಿ ಮಠದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದಾದ ಎರಡು ದಿನಗಳ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.