ಸಹಾಯಕ ಲೆಕ್ಕಿಗ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ:14 ಸ್ಥಳಗಳಲ್ಲಿ ಶೋಧ

ನವದೆಹಲಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (ಜೆಕೆಎಸ್‌ಎಸ್‌ಬಿ) ನಡೆಸಿದ್ದ ‘ಸಹಾಯಕ ಲೆಕ್ಕಿಗ ನೇಮಕಾತಿ’ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ಜಮ್ಮು ಮತ್ತು ಕಾಶ್ಮೀರದ 14 ಪ್ರದೇಶಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಗರಣದಲ್ಲಿ ಜೆಕೆಎಸ್‌ಎಸ್‌ಬಿ ಸದಸ್ಯರು ಸೇರಿದಂತೆ 20 ಮಂದಿಯ ವಿರುದ್ಧ ತನಿಖಾ ಸಂಸ್ಥೆ ಪ್ರಕರಣ ದಾಖಲಿಸಿದೆ. ಜೆಕೆಎಸ್ಎಸ್‌ಬಿ ಮಾಜಿ ಸದಸ್ಯ ನೀಲಂ ಖಜುರಿಯಾ ಅವರ ನಿವಾಸದ ಆವರಣದಲ್ಲೂ ಶೋಧಕಾರ್ಯ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು ಮತ್ತು ಸಾಂಬಾ ಸೇರಿದಂತೆ ಇಲ್ಲಿಯವರೆಗೆ 14 ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.