ಸೋಮವಾರ, ಆಗಸ್ಟ್ 8, 2022
24 °C

ಉತ್ತರಪ್ರದೇಶದಲ್ಲಿ ಗೋಮತಿ ನದಿ ಯೋಜನೆ ಅಕ್ರಮ: 43 ಕಡೆ ಸಿಬಿಐ ಶೋಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉತ್ತರಪ್ರದೇಶದ ಲಖನೌನ ಗೋಮತಿ ನದಿ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ. ಸಮಾಜವಾದಿ ಪಕ್ಷದ ಸರ್ಕಾರದ ಆಡಳಿತ ಅವಧಿಯಲ್ಲಿ ಈ ಯೋಜನೆ ಜಾರಿಗೆ ಬಂದಿದೆ.

‘ಈ ಸಂಬಂಧ ದಾಖಲಿಸಲಾದ ಎಫ್‌ಐಆರ್‌ ಆಧರಿಸಿ ಹಲವು ರಾಜ್ಯಗಳ 43 ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಸೋಮವಾರ ಬೆಳಿಗ್ಗೆ ಆರಂಭಗೊಂಡಿರುವ ಕಾರ್ಯಾಚರಣೆಯು ಸಂಜೆಯವರೆಗೆ ಮುಂದುವರಿಯುವ ಸಾಧ್ಯತೆಗಳಿವೆ’ ಎಂದು ಅಧಿಕಾರಿಗಳು ತಿಳಿಸಿದರು.

ಉತ್ತರ ಪ್ರದೇಶ ಸರ್ಕಾರದ ಹಲವು ಎಂಜಿನಿಯರ್‌ಗಳು ಸೇರಿದಂತೆ 180 ಅಧಿಕಾರಿಗಳ ಹೆಸರುಗಳು ಎಫ್‌ಐಆರ್‌ನಲ್ಲಿವೆ. ಇದು ಈ ಯೋಜನೆಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಎರಡನೇ ಎಫ್‌ಐಆರ್‌ ಆಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು