ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ಒಂಬತ್ತು ಪ್ರಕರಣ ದಾಖಲಿಸಿದ ಸಿಬಿಐ

Last Updated 26 ಆಗಸ್ಟ್ 2021, 7:47 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಒಂಬತ್ತು ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

ಹಿಂಸಾಚಾರ ಪ್ರಕರಣಗಳ ತನಿಖೆಗೆ ನಿಯೋಜಿಸಿರುವ ಎಲ್ಲ ತನಿಖಾ ಸಂಸ್ಥೆಗಳ ವಿಶೇಷ ಘಟಕಗಳು ಕೋಲ್ಕತ್ತದಿಂದ ಬೇರೆ ಬೇರೆ ಕಡೆ ಘಟನೆಗಳು ನಡೆದಿರುವ ಜಾಗಗಳಿಗೆ ಸ್ಥಳಾಂತರಗೊಂಡಿವೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಪ್ರಕರಣಗಳು ನೋಂದಣಿ ಪ್ರಕ್ರಿಯೆಯಲ್ಲಿವೆ. ಅವುಗಳಲ್ಲಿ ಕೆಲವನ್ನು ರಾಜ್ಯ ಸರ್ಕಾರ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿದೆ.

ಈ ವರ್ಷದ ಆರಂಭದಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರ ಕುರಿತು ತನಿಖೆಯನ್ನು ಕಲ್ಕತ್ತಾ ಹೈಕೋರ್ಟ್‌ ಸಿಬಿಐಗೆ ವಹಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT