ಶನಿವಾರ, ಜೂನ್ 19, 2021
26 °C

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್‌ ದೇಶಮುಖ್ ನಿವಾಸದಲ್ಲಿ ಸಿಬಿಐ ಶೋಧ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನಾಗಪುರ: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಶನಿವಾರ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್ ಅವರ ನಿವಾಸಿಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

ಶುಕ್ರವಾರ ರಾತ್ರಿ ನಾಗಪುರಕ್ಕೆ ಬಂದಿಳಿದ ಸಿಬಿಐ ತಂಡ, ಶನಿವಾರ ಬೆಳಿಗ್ಗೆ ನಾಗಪುರದಲ್ಲಿ ಸಿವಿಲ್‌ ಲೈನ್ಸ್‌ ಪ್ರದೇಶದ ಜಿಪಿಒ ಚೌಕದಲ್ಲಿರುವ ಸಚಿವರ ನಿವಾಸದಲ್ಲಿ ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಗಪುರದಿಂದ 60 ಕಿ.ಮೀ ದೂರದಲ್ಲಿರುವ ದೇಶಮುಖ್‌ ಅವರ ವಿಧಾನಸಭಾ ಕ್ಷೇತ್ರದ ಕಟೋಲ್ ಪಟ್ಟಣಕ್ಕೂ ತಂಡ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಚಿವರ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಾಡಿರುವ ಲಂಚದ ಆರೋಪಗಳನ್ನು ಪರಿಶೀಲಿಸುವಂತೆ ಬಾಂಬೆ ಹೈಕೋರ್ಟ್‌ ಆದೇಶಿತ್ತು. ಈ ಆದೇಶದ ಮೇರೆಗೆ ಸಿಬಿಐ ಪ್ರಾಥಮಿಕ ತನಿಖೆ ನಡೆಸುವ ಜತೆಗೆ, ದೇಶಮುಖ್ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ದೇಶಮುಖ್ ಅವರ ಮುಂಬೈನ ನಿವಾಸ ಮತ್ತಿತರ ಸ್ಥಳಗಳಲ್ಲೂ ಸಿಬಿಐ ಶೋಧಕಾರ್ಯ ನಡೆಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು