ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿಜಿತ್ ಸರ್ಕಾರ್ ಹತ್ಯೆ ಪ್ರಕರಣ: ಟಿಎಂಸಿ ಶಾಸಕನಿಗೆ ಸಿಬಿಐ ಸಮನ್ಸ್

Last Updated 16 ಮೇ 2022, 12:34 IST
ಅಕ್ಷರ ಗಾತ್ರ

ಕೋಲ್ಕತ್ತ: ‘ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಬಿಐ, ಬಿಜೆಪಿ ಕಾರ್ಯಕರ್ತ ಅಭಿಜಿತ್ ಸರ್ಕಾರ್ ಅವರ ಹತ್ಯೆಯ ತನಿಖೆಗೆ ಸಂಬಂಧಿಸಿದಂತೆ ಟಿಎಂಸಿ ಶಾಸಕ ಪರೇಶ್ ಪಾಲ್ ಅವರಿಗೆ ಸಮನ್ಸ್ ನೀಡಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

‘ಸರ್ಕಾರ್ ಹತ್ಯೆಗೆ ಸಂಬಂಧಿಸಿದಂತೆ ನಗರದಲ್ಲಿರುವ ಸಿಬಿಐ ಕಚೇರಿಯಲ್ಲಿ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಪಾಲ್ ಅವರಿಗೆ ಸೂಚಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಮೇ 2ರಂದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತ ಅಭಿಜಿತ್ ಸರ್ಕಾರ್ ಅವರನ್ನು ಕಂಕುರ್ಗಾಚಿ ಪ್ರದೇಶದಲ್ಲಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ಪಾಲ್ ಅವರೇ ಕಾರಣವೆಂದು ಸರ್ಕಾರ್ ಕುಟುಂಬವು ಆರೋಪಿಸಿತ್ತು. ಈ ಸಂಬಂಧ ಪ್ರತಿಕ್ರಿಯೆ ಪಡೆಯಲು ಪಾಲ್ ಅವರಿಗೆ ಸಂಪರ್ಕಿಸಿದರೆ ಅವರು ಯಾವುದೇ ಕರೆ ಸ್ವೀಕರಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT