ಶನಿವಾರ, ಏಪ್ರಿಲ್ 17, 2021
32 °C

ಕಲ್ಲಿದ್ದಲು ಕಳವು ಪ್ರಕರಣ: ಅಭಿಷೇಕ್ ಬ್ಯಾನರ್ಜಿ ಸಂಬಂಧಿಗೆ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 15ರಂದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿಯ ಸಂಬಂಧಿ ಅಂಕುಶ್‌ ಅರೋರಾ ಅವರಿಗೆ ಸಿಬಿಐ ನೋಟಿಸ್‌ ನೀಡಿದೆ.

ಅಭಿಷೇಕ್ ಬ್ಯಾನರ್ಜಿ ಅವರ ಅತ್ತಿಗೆ ಮೇನಕಾ ಗಂಭೀರ್‌ ಅವರ ಪತಿ ಅಂಕುಶ್‌ ಅರೋರಾ. ‌ಜತೆಗೆ ಅಂಕುಶ್‌ ಅವರ ತಂದೆ ಪವನ್‌ ಅರೋರಾ ಅವರಿಗೂ ಹಾಜರಾಗಲು ನೋಟಿಸ್‌ ನೀಡಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇತ್ತೀಚೆಗಷ್ಟೇ ಅಭಿಷೇಕ್ ಪತ್ನಿ ರುಜಿರಾ ಮತ್ತು ಮೇನಕಾ ಗಂಭೀರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.

ಮಮತಾ ಬ್ಯಾನರ್ಜಿ ಅವರ ಚುನಾವಣಾ ಪ್ರಚಾರದಲ್ಲಿ ಡೈಮಂಡ್‌ ಹಾರ್ಬರ್‌ ಕ್ಷೇತ್ರದ ಸಂಸದ ಅಭಿಷೇಕ್‌ ಬ್ಯಾನರ್ಜಿ ಬಲಗೈ ಬಂಟನಂತೆಯೇ ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿಯನ್ನು ಶತಾಯಗತಾಯ ಸೋಲಿಸುವ ಹುಮ್ಮಸ್ಸಿನಲ್ಲಿದ್ದಾರೆ. ಹೀಗಾಗಿ ಕಲ್ಲಿದ್ದಲು ಪ್ರಕರಣಕ್ಕೂ ವಿಶೇಷ ಮಹತ್ವ ದೊರೆತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು