ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಈ ಬಾರಿ ಪಠ್ಯಕ್ರಮ ಕಡಿತ ಇಲ್ಲ’

Last Updated 2 ಏಪ್ರಿಲ್ 2021, 19:41 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2021–22ರ ಶೈಕ್ಷಣಿಕ ವರ್ಷದಲ್ಲಿ 9ರಿಂದ 12ನೇ ತರಗತಿಯ ಪಠ್ಯಕ್ರಮವನ್ನು ಕಡಿತಗೊಳಿಸದಿರಲು ಸಿಬಿಎಸ್‌ಇ ನಿರ್ಧರಿಸಿದೆ.

ಕೋವಿಡ್‌–19 ಬಿಕ್ಕಟ್ಟಿನ ಕಾರಣಕ್ಕೆ ಕಳೆದ ವರ್ಷ 9ರಿಂದ 12ನೇ ತರಗತಿಯವರೆಗಿನ ಪಠ್ಯಕ್ರಮವನ್ನು ಪರಿಷ್ಕರಿಸಿ ಶೇಕಡ 30ರಷ್ಟು ಕಡಿತಗೊಳಿಸಿತ್ತು. ಈ ಪಠ್ಯಕ್ರಮವನ್ನು ಅಧ್ಯಯನ ಮಾಡಿದ ವಿದ್ಯಾರ್ಥಿಗಳು ಮೇ ಮತ್ತು ಜೂನ್‌ನಲ್ಲಿ ನಡೆಯುವ ಪರೀಕ್ಷೆಗೆ
ಹಾಜರಾಗಲಿದ್ದಾರೆ.

ಕಳೆದ ವರ್ಷ ಕಡಿತಗೊಳಿಸಲಾಗಿದ್ದ ಅಧ್ಯಾಯಗಳು ಮತ್ತು ವಿಷಯಗಳನ್ನು 2021–22ನೇ ಶೈಕ್ಷಣಿಕ ವರ್ಷದ ಪಠ್ಯಕ್ರಮದಲ್ಲಿ ಮತ್ತೆ ಸೇರ್ಪಡೆ ಮಾಡಲಾಗಿದೆ.

ಕಳೆದ ವರ್ಷ ಆನ್‌ಲೈನ್‌ ಮೂಲಕ ಬೋಧನೆ ಮಾಡಲಾಗಿತ್ತು. ಇದು ಹೊಸ ಕ್ರಮವಾಗಿತ್ತು. ಹೀಗಾಗಿ, ಒಂದು ಬಾರಿ ಮಾತ್ರ ಪಠ್ಯಕ್ರಮದಲ್ಲಿ ಕಡಿತಗೊಳಿಸುವುದಾಗಿ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT