ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಮತ್ತು 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ ಸಿಬಿಎಸ್ಇ

Last Updated 29 ಡಿಸೆಂಬರ್ 2022, 16:17 IST
ಅಕ್ಷರ ಗಾತ್ರ

ನವದೆಹಲಿ:ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ(ಸಿಬಿಎಸ್‌ಇ)ಯ10ನೇ ಮತ್ತು 12ನೇ ತರಗತಿಯ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ

ಎರಡೂ ತರಗತಿಗಳ ಪರೀಕ್ಷೆಗಳು ಫೆಬ್ರವರಿ 15ರಂದೇ ಆರಂಭವಾಗಲಿವೆ ಎಂದುಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

10ನೇ ತರಗತಿ ಪರೀಕ್ಷೆ ಫೆಬ್ರವರಿ 15ರಿಂದ ಆರಂಭವಾಗಿ ಮಾರ್ಚ್ 21ಕ್ಕೆ ಮುಕ್ತಾಯವಾಗಲಿವೆ. ಹಾಗೇ 12ನೇ ತರಗತಿ ಪರೀಕ್ಷೆ ಫೆಬ್ರವರಿ 15ರಂದು ಪ್ರಾರಂಭವಾಗಿ, ಏಪ್ರಿಲ್ 5ಕ್ಕೆಯಾಗಲಿವೆ.

ಉಭಯ ತರಗತಿಗಳ ಪರೀಕ್ಷೆ ಬೆಳಗ್ಗೆ 10.30ಕ್ಕೆ ಆರಂಭವಾಗಿ ಮಧ್ಯಾಹ್ನ 1.30ಕ್ಕೆ ಮುಕ್ತಾಯವಾಗಲಿವೆ.

ಇದರ ಜೊತೆಗೆವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಓದಿಕೊಳ್ಳಲು 15 ನಿಮಿಷ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ ಎಂದುಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT