ಶನಿವಾರ, ಫೆಬ್ರವರಿ 27, 2021
30 °C
ಜುಲೈ 15ರೊಳಗಾಗಿ ಫಲಿತಾಂಶ: ಸಚಿವ ಪೋಖ್ರಿಯಾಲ್‌

ಸಿಬಿಎಸ್‌ಇ: 10, 12ನೇ ತರಗತಿಗೆ ಮೇ 4ರಿಂದ ಪರೀಕ್ಷೆ

‍ಪಿಟಿಐ Updated:

ಅಕ್ಷರ ಗಾತ್ರ : | |

ಸಿಬಿಎಸ್‌ಇ ಪರೀಕ್ಷೆ

ನವದೆಹಲಿ: ‘ಸಿಬಿಎಸ್‌ಇ 10 ಹಾಗೂ 12ನೇ ತರಗತಿ ಪರೀಕ್ಷೆಗಳು ಮೇ 4ರಿಂದ ಜೂನ್‌ 10 ವರೆಗೆ ನಡೆಯಲಿವೆ. ಜುಲೈ 15ರ ಒಳಗೆ ಫಲಿತಾಂಶಪ್ರಕಟಿಸಲಾಗುವುದು’ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌ ಗುರುವಾರ ತಿಳಿಸಿದರು.

ಮಾರ್ಚ್‌ 1ರಿಂದ ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿಯೇ ನಡೆಸಲಾಗುವುದು. ವಿಷಯವಾರು ಪರೀಕ್ಷೆ ಕುರಿತ ವೇಳಾಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು. 25ಕ್ಕೂ ಅಧಿಕ ದೇಶಗಳಲ್ಲಿರುವ ಸಿಬಿಎಸ್‌ಇ ಶಾಲೆಗಳಲ್ಲಿ ಪರೀಕ್ಷೆ ನಡೆಸುವ ಸಂಬಂಧ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದೂ ತಿಳಿಸಿದರು.

ಸಾಮಾನ್ಯವಾಗಿ ಜನವರಿಯಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಿ, ಫೆಬ್ರುವರಿಯಲ್ಲಿ ಲಿಖಿತ ಪರೀಕ್ಷೆಗಳನ್ನು ಆರಂಭಿಸಲಾಗುತ್ತಿತ್ತು. ಕೋವಿಡ್‌–19 ಪರಿಸ್ಥಿತಿಯಿಂದಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ವಾರ್ಷಿಕ ಪರೀಕ್ಷೆಗಳನ್ನು ಆನ್‌ಲೈನ್‌ ಮೂಲಕ ನಡೆಸುವುದಿಲ್ಲ ಎಂದು ಸಿಬಿಎಸ್‌ಇ ಸ್ಪಷ್ಟಪಡಿಸಿತ್ತು. ಕೆಲವು ಶಾಲೆಗಳು ಈಗಾಗಲೇ ಆನ್‌ಲೈನ್‌ ಮೂಲಕ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು