ನವದೆಹಲಿ: 10 ಮತ್ತು 12ನೇ ತರಗತಿ ಪೂರಕ ಪರೀಕ್ಷೆಗಳನ್ನು ಇದೇ 22ರಿಂದ 29ರವರೆಗೆ ನಡೆಸಲಾಗುವುದು ಎಂದುಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಶುಕ್ರವಾರ ಪ್ರಕಟಿಸಿದೆ.

ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತಿದ್ದು, ಪರೀಕ್ಷಾರ್ಥಿಗಳು ಮಾಸ್ಕ್, ಸ್ಯಾನಿಟೈಸರ್ ಮತ್ತು ನೀರಿನ ಬಾಟಲಿಯೊಂದಿಗೆ ಹಾಜರಾಗಬೇಕು ಎಂದು ಪರೀಕ್ಷಾ ನಿಯಂತ್ರಕ ಶ್ಯಾಮ್ ಬಾರಧ್ವಾಜ್ ತಿಳಿಸಿದ್ದಾರೆ.

ಇದಕ್ಕೂ ಮೊದಲು ಪರೀಕ್ಷೆ ಮುಂದೂಡುವ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಅರ್ಜಿ ವಿಚಾರಣೆಯಲ್ಲಿ, ನಿಗದಿಯಂತೆ ಪರೀಕ್ಷೆಗಳನ್ನು ನಡೆಸುವುದಾಗಿ ಸಿಬಿಎಸ್‌ಇ ತಿಳಿಸಿತ್ತು. ಪರೀಕ್ಷಾ ಕೇಂದ್ರಗಳನ್ನು 575ರಿಂದ 1278ಕ್ಕೆ ಹೆಚ್ಚಿಸಿರುವುದು. ಪ್ರತಿ ಕೊಠಡಿಯಲ್ಲಿ 40 ವಿದ್ಯಾರ್ಥಿಗಳ ಬದಲಾಗಿ 12 ಮಂದಿಗೆ ಪರೀಕ್ಷೆ ಬರೆಯುವ ಅವಕಾಶ ನೀಡಿರುವುದು ಸೇರಿದಂತೆ ಅನುಸರಿಸುತ್ತಿರುವ ವಿವಿಧ ಸುರಕ್ಷತಾ ಕ್ರಮಗಳ ಬಗ್ಗೆ ಕೋರ್ಟ್‌ಗೆ ಮಾಹಿತಿ ನೀಡಿತ್ತು. ಪರೀಕ್ಷೆ ಮುಂದೂಡುವುದಕ್ಕೆ ವಿರೋಧ ವ್ಯಕ್ತಪಡಿಸಿತ್ತು.

ಈ ಕುರಿತು ಅಫಿಡವಿಟ್ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠವು ಸಿಬಿಎಸ್‌ಇಗೆ ಸೂಚಿಸಿದ್ದು, ವಿಚಾರಣೆಯನ್ನು ಇದೇ 10ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.