ಗುರುವಾರ , ಅಕ್ಟೋಬರ್ 22, 2020
22 °C

ಸಿಬಿಎಸ್‌ಇ 10ನೇ ತರಗತಿ ಪೂರಕ ಪರೀಕ್ಷೆ: ಶೇ 56 ವಿದ್ಯಾರ್ಥಿಗಳು ತೇರ್ಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹತ್ತನೇ ತರಗತಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಸಿಬಿಎಸ್‌ಇ ಸೋಮವಾರ ಪ್ರಕಟಿಸಿದ್ದು, ಶೇ 56 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 

ಪರೀಕ್ಷೆಗೆ 1.57 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು, ಈ ಪೈಕಿ 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 82,903 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. 

ಕೋವಿಡ್‌–19 ಪಿಡುಗಿನ ನಡುವೆ ಹೆಚ್ಚಿನ ಮುಂಜಾಗ್ರತಾ ಕ್ರಮಗಳೊಂದಿಗೆ ಕಳೆದ ಸೆ.22ರಿಂದ ದೇಶದಾದ್ಯಂತ ಇರುವ 1,268 ಪರೀಕ್ಷಾ ಕೇಂದ್ರಗಳಲ್ಲಿ 10 ಮತ್ತು 12ನೇ ತರಗತಿಯ ಪೂರಕ ಪರೀಕ್ಷೆ ನಡೆದಿತ್ತು. ಪರೀಕ್ಷೆಗಳು ರದ್ದುಗೊಂಡಿದ್ದ ಕಾರಣ, ಹಿಂದಿನ ಪರೀಕ್ಷೆಗಳಲ್ಲಿನ ಅಂಕಗಳ ಆಧಾರದಲ್ಲಿ ತೇಗರ್ಡೆಯಾದ 12ನೇ ತರಗತಿ ವಿದ್ಯಾರ್ಥಿಗಳಿಗೂ ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗಿತ್ತು. ಆದರೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಈ ಅವಕಾಶ ನೀಡಲಾಗಿರಲಿಲ್ಲ.     

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು