ಬುಧವಾರ, ಜೂನ್ 29, 2022
25 °C

10ನೇ ತರಗತಿ: ಮೊದಲ ಹಂತದ ಪರೀಕ್ಷಾ ಫಲಿತಾಂಶ ಶಾಲೆಗಳಿಗೆ ರವಾನೆ – ಸಿಬಿಎಸ್ಇ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ(ಸಿಬಿಎಸ್ಇ) ಪಠ್ಯಕ್ರಮದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದ ಮೊದಲ ಹಂತದ ಪರೀಕ್ಷಾ ಫಲಿತಾಂಶವನ್ನು ಆಯಾ ಶಾಲೆಗಳಿಗೆ ಕಳುಹಿಸಲಾಗಿದೆ ಎಂದು ಸಿಬಿಎಸ್ಇ ತಿಳಿಸಿದೆ. 

2022ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ 2 ಹಂತಗಳಲ್ಲಿ ಪರೀಕ್ಷೆ ನಡೆಸುವುದಾಗಿ ಸಿಬಿಎಸ್ಇ ಕಳೆದ ವರ್ಷ ಘೋಷಣೆ ಮಾಡಿತ್ತು. ಆ ಪ್ರಕಾರ ಮೊದಲ ಹಂತದಲ್ಲಿ 2021ರ ನವೆಂಬರ್ 30ರಿಂದ ಡಿಸೆಂಬರ್ 11ರವರೆಗೆ ಪರೀಕ್ಷೆಗಳನ್ನು ನಡೆಸಿತ್ತು. ಈ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳನ್ನು ಶಾಲೆಗಳಿಗೆ ತಿಳಿಸಲಾಗಿದೆ. ಇನ್ನು ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಅಥವಾ ಪ್ರಾಕ್ಟಿಕಲ್ ಅಂಕಗಳು ಶಾಲೆಗಳ ಬಳಿಯೇ ಇದೆ ಎಂದು ಸಿಬಿಎಸ್ಇ ತಿಳಿಸಿದೆ. 2ನೇ ಹಂತದ ಪರೀಕ್ಷೆಗಳು ಏ.26ರಿಂದ ನಡೆಯಲಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು