ಭಾನುವಾರ, ಜನವರಿ 16, 2022
28 °C

10–12ನೇ ತರಗತಿ ಪರೀಕ್ಷೆ: ಅಧಿಕೃತ ವೇಳಾಪಟ್ಟಿ ಪ್ರಕಟಿಸಿಲ್ಲ–ಸಿಬಿಎಸ್‌ಇ ಸ್ಪಷ್ಟನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ನವೆಂಬರ್‌ನಲ್ಲಿ ನಡೆಯಲಿರುವ 10 ಹಾಗೂ 12ನೇ ತರಗತಿಗಳ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ವೇಳಾಪಟ್ಟಿಯನ್ನು ಮಂಡಳಿ ಬಿಡುಗಡೆ ಮಾಡಿಲ್ಲ’ ಎಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸೋಮವಾರ ತಿಳಿಸಿದೆ.

‘ಈ ಪರೀಕ್ಷೆಗಳಿಗೆ ಸಂಬಂಧಿಸಿದ್ದು ಎನ್ನಲಾದ ವೇಳಾಪಟ್ಟಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಈ ನಕಲಿ ವೇಳಾಪಟ್ಟಿಯನ್ನು ಹರಿಬಿಡಲಾಗಿದೆ’ ಎಂದೂ ಸಿಬಿಎಸ್‌ಇ ತಿಳಿಸಿದೆ.

10 ಹಾಗೂ 12ನೇ ತರಗತಿಗಳ ಪ್ರಥಮಾವಧಿಯ ಪರೀಕ್ಷೆಗಳನ್ನು ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ನಡೆಸಲಾಗುವುದು. ಪರೀಕ್ಷೆಗಳಿಗೆ ಸಂಬಂಧಿಸಿದ ವೇಳಾಪಟ್ಟಿಯನ್ನು ಅ.18ರಂದು ಪ್ರಕಟಿಸುವುದಾಗಿ ಸಿಬಿಎಸ್‌ಇ ಕಳೆದ ವಾರ ತಿಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು