ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್‌ಇ: 10, 12ನೇ ತರಗತಿಯ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

Last Updated 20 ಅಕ್ಟೋಬರ್ 2021, 13:31 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊದಲ ಅವಧಿಯ ಬೋರ್ಡ್‌ ಪರೀಕ್ಷೆಗಾಗಿ ಪರೀಕ್ಷಾ ಕೇಂದ್ರಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡುವುದಾಗಿ ಬುಧವಾರ ಘೋಷಿಸಿದೆ.

ಕೆಲ ವಿದ್ಯಾರ್ಥಿಗಳು ತಾವು ಪ್ರವೇಶ ಪಡೆದಿರುವ ಶಾಲೆಯ ನಗರಗಳಿಗೆ ಇನ್ನೂ ಹಿಂತಿರುಗಿಲ್ಲ. ಅವರು ಬೇರೆಡೆ ವಾಸಿಸುತ್ತಿದ್ದಾರೆ. ಹೀಗಾಗಿ ಅವರು ತಮ್ಮ ಶಾಲೆಯಿರುವ ನಗರಕ್ಕೆ ಹೋಗಿ ಪರೀಕ್ಷೆ ಬರೆಯವುದು ಕಷ್ಟವಾಗುತ್ತದೆ ಎಂಬುದು ಮಂಡಳಿಯ ಗಮನಕ್ಕೆ ಬಂದಿದೆ. ಈ ಕುರಿತು ವಿದ್ಯಾರ್ಥಿಗಳು ಮಾಡಿದ ಮನವಿಯನ್ನು ಗಮನದಲ್ಲಿಟ್ಟುಕೊಂಡು, ಪರೀಕ್ಷಾ ಕೇಂದ್ರಗಳ ಬದಲಾವಣೆಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

ಈ ಸಂಬಂಧ ಸದ್ಯದಲ್ಲಿಯೇ ಸಿಬಿಎಸ್‌ಇ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗುವುದು. ವಿದ್ಯಾರ್ಥಿಗಳು ಮತ್ತು ಶಾಲಾ ಆಡಳಿತ ಮಂಡಳಿಗಳು ವೆಬ್‌ಸೈಟ್‌ ಅನ್ನು ಗಮನಿಸುತ್ತಿರುವಂತೆ ಸಿಬಿಎಸ್‌ಇ ಪರೀಕ್ಷಾ ನಿಯಂತ್ರಣಾಧಿಕಾರಿ ಸನ್ಯಂ ಭಾರದ್ವಾಜ್‌ ತಿಳಿಸಿದ್ದಾರೆ.

10ನೇ ತರಗತಿಯ ಮೊದಲ ಅವಧಿ ಪರೀಕ್ಷೆಗಳು ನವೆಂಬರ್‌ 30ರಿಂದ ಹಾಗೂ 12ನೇ ತರಗತಿಯ ಪರೀಕ್ಷೆಗಳು ಡಿಸೆಂಬರ್‌ 1ರಿಂದ ಆರಂಭವಾಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT