ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್‌ಇ ಫಲಿತಾಂಶ ಸುಧಾರಣೆ: ಆ. 25ರಿಂದ 10, 12ನೇ ತರಗತಿ ಪರೀಕ್ಷೆ

ಸೆ. 30ರಂದು ಫಲಿತಾಂಶ ಪ್ರಕಟ: ‘ಸುಪ್ರೀಂ‘ಗೆ ಮಾಹಿತಿ
Last Updated 5 ಆಗಸ್ಟ್ 2021, 14:27 IST
ಅಕ್ಷರ ಗಾತ್ರ

ನವದೆಹಲಿ: ಫಲಿತಾಂಶ ಸುಧಾರಣೆ ಮಾಡಿಕೊಳ್ಳಲು ಬಯಸುವ 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಆಗಸ್ಟ್‌ 25ರಿಂದ ಸೆ.15ರ ವರೆಗೆ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಸುಪ್ರೀಂಕೋರ್ಟ್‌ಗೆ ಗುರುವಾರ ತಿಳಿಸಿದೆ.

ಸೆಪ್ಟೆಂಬರ್‌ 30ರಂದು ಈ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುವುದು.ವಿದ್ಯಾರ್ಥಿಗಳು ಆ. 10ರಿಂದ ಸಿಬಿಎಸ್‌ಇ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಅದೇ ದಿನ ಪರೀಕ್ಷಾ ವೇಳಾಪಟ್ಟಿಯನ್ನು ಸಹ ಪ್ರಕಟಿಸಲಾಗುವುದು ಎಂದೂ ಸಿಬಿಎಸ್‌ಇ ತಿಳಿಸಿದೆ.

ನ್ಯಾಯಮೂರ್ತಿ ಎ.ಎಂ.ಖಾನ್ವೀಲ್ಕರ್‌ ನೇತೃತ್ವದ ನ್ಯಾಯಪೀಠವು ಸಿಬಿಎಸ್‌ಇ ಸಲ್ಲಿಸಿದ ಈ ಪರೀಕ್ಷಾ ವೇಳಾಪಟ್ಟಿಯನ್ನು ಅನುಮೋದಿಸಿತು.

ಕೋವಿಡ್‌ನಿಂದಾಗಿ 10 ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಯಿತು. ಫಲಿತಾಂಶ ಘೋಷಣೆಗಾಗಿ ಪರ್ಯಾಯ ಮೌಲ್ಯಮಾಪನ ಸೂತ್ರವನ್ನು ಅಳವಡಿಸಿಕೊಳ್ಳಲಾಗಿತ್ತು. ಈ ಸೂತ್ರದಡಿ ಎಷ್ಟು ಅಂಕಗಳನ್ನು ಕಡಿತಗೊಳಿಸಲಾಗಿತ್ತು ಎಂಬ ಮಾಹಿತಿಯನ್ನು ಪ್ರತಿಯೊಬ್ಬ ವಿದ್ಯಾರ್ಥಿಗೂ ಒದಗಿಸುವಂತೆ ನ್ಯಾಯಪೀಠ ಸೂಚಿಸಿತು.

ಮಂಡಳಿಯು ಸ್ವಾಯತ್ತ ಸಂಸ್ಥೆಯಾಗಿದ್ದು, ಸರ್ಕಾರದಿಂದ ಅನುದಾನ ಬಂದಿಲ್ಲ. ಹೀಗಾಗಿ 2020–21ನೇ ಸಾಲಿನ ಪರೀಕ್ಷೆಗಾಗಿ ಪಡೆದಿದ್ದ ಶುಲ್ಕದ ಮೊತ್ತ ₹ 1,500 ಅನ್ನು ವಿದ್ಯಾರ್ಥಿಗಳಿಗೆ ಮರುಪಾವತಿಸುವುದಿಲ್ಲ ಎಂದೂ ಸಿಬಿಎಸ್‌ಇ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT