ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ
ಜ. 29ರಿಂದ ಬಜೆಟ್ ಅಧಿವೇಶನಕ್ಕೆ ಶಿಫಾರಸು

ನವದೆಹಲಿ: ಸಂಸತ್ನ ಬಜೆಟ್ ಅಧಿವೇಶನವನ್ನು ಜನವರಿ 29ರಂದು ಆರಂಭಿಸಿ, ಏಪ್ರಿಲ್ 8ಕ್ಕೆ ಮುಕ್ತಾಯಗೊಳಿಸಬೇಕು ಎಂದು ಸಂಸದೀಯ ವ್ಯವಹಾರಗಳಿಗೆ ಸಂಬಂಧಿಸಿದ ಸಂಪುಟ ಸಮಿತಿ (ಸಿಸಿಪಿಎ) ಶಿಫಾರಸು ಮಾಡಿದೆ.
ಬಜೆಟ್ನ ಮೊದಲ ಹಂತದ ಅಧಿವೇಶನ ಜನವರಿ 29ರಿಂದ ಫೆಬ್ರುವರಿ 15, ಎರಡನೇ ಹಂತದ ಅಧಿವೇಶನ ಮಾರ್ಚ್ 8ರಿಂದ ಏಪ್ರಿಲ್ 8ರ ವರೆಗೆ ನಡೆಸುವಂತೆಯೂ ಸಮಿತಿ ಶಿಫಾರಸು ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ಸಂಪುಟ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ.
ಜ. 29ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಂಸತ್ನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವರು. ಫೆಬ್ರುವರಿ 1ರಂದು ಬಜೆಟ್ ಮಂಡನೆಯಾಗಬೇಕು ಎಂದೂ ಸಮಿತಿ ಶಿಫಾರಸು ಮಾಡಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.