ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಎಎಲ್‌ ನಿರ್ಮಿತ 70 ತರಬೇತಿ ವಿಮಾನ ಖರೀದಿಗೆ ಅನುಮೋದನೆ

Last Updated 1 ಮಾರ್ಚ್ 2023, 16:09 IST
ಅಕ್ಷರ ಗಾತ್ರ

ನವದೆಹಲಿ: ವಾಯುಪಡೆಗಾಗಿ ಎಚ್‌ಎಎಲ್‌ ನಿರ್ಮಿತ 70 ತರಬೇತಿ ವಿಮಾನಗಳನ್ನು (ಎಚ್‌ಟಿಟಿ–40) ₹6,828 ಕೋಟಿ ವೆಚ್ಚದಲ್ಲಿ ಖರೀದಿಸಲು ಪ್ರಧಾನಿ ನರೇಂಧ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿಯು (ಸಿಸಿಎಸ್‌) ಬುಧವಾರ ಅನುಮೋದನೆ ನೀಡಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು, ‘ಈ ವಿಮಾನಗಳನ್ನು ಮುಂದಿನ ಆರು ವರ್ಷಗಳ ಅವಧಿಯಲ್ಲಿ ಪೂರೈಕೆ ಮಾಡಲಾಗುತ್ತದೆ’ ಎಂದು ತಿಳಿಸಿದ್ದಾರೆ.

‘ದೇಶದ ರಕ್ಷಣಾ ಕ್ಷೇತ್ರವನ್ನು ಸ್ವಾವಲಂಬಿಯನ್ನಾಗಿಸುವ ಹಾಗೂ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಈ ನಿರ್ಧಾರ ಮಹತ್ವದ ಹೆಜ್ಜೆಯಾಗಿದೆ. ದೇಶದಲ್ಲಿರುವ ನೂರಾರು ಸಣ್ಣ, ಮಧ್ಯಮ ಉದ್ದಿಮೆಗಳಿಗೆ ವಿಪುಲ ಅವಕಾಶಗಳು ತೆರೆದುಕೊಳ್ಳಲಿವೆ’ ಎಂದೂ ಹೇಳಿದ್ದಾರೆ.

‘ಹಿಂದೂಸ್ತಾನ್ ಏರೋನಾಟಿಕ್ಸ್‌ ಲಿಮಿಟೆಡ್ (ಎಚ್‌ಎಎಲ್) ನಿರ್ಮಿಸುವ ಈ ವಿಮಾನಗಳು ಕಡಿಮೆ ವೇಗದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿವೆ. ಹೀಗಾಗಿ, ಇವುಗಳನ್ನು ಬಳಸಿ ಪರಿಣಾಮಕಾರಿ ತರಬೇತಿ ನೀಡಲು ಸಾಧ್ಯ’ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT