ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

CCTV Video: ತಮಿಳುನಾಡಿನಲ್ಲಿ ಎರಡು ಬಸ್​​ಗಳ ಮಧ್ಯೆ ಅಪಘಾತ

Last Updated 18 ಮೇ 2022, 11:28 IST
ಅಕ್ಷರ ಗಾತ್ರ

ಸೇಲಂ(ತಮಿಳುನಾಡು): ತಮಿಳುನಾಡಿನ ಸೇಲಂನಲ್ಲಿ ಎರಡು ಖಾಸಗಿ ಬಸ್ಗಳ ಮಧ್ಯೆ ಡಿಕ್ಕಿ ಸಂಭವಿಸಿದ್ದು 30 ಹೆಚ್ಚು ಜನರ ಗಾಯಗೊಂಡಿದ್ದಾರೆ. ಅಪಘಾತದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಅಪಘಾತ ವಿಡಿಯೊ ಬಸ್‌ನಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಡಪ್ಪಾಯಿ ಕಡೆಯಿಂದ ಬರುತ್ತಿದ್ದ ಬಸ್‌ ಹಾಗೂ ತಿರುಚೆಂಗೋಡಿನಿಂದ ಬರುತ್ತಿದ್ದ ಇನ್ನೊಂದು ಬಸ್ಗೆ ಡಿಕ್ಕಿ ಹೊಡೆದಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.ಅಪಘಾತದ ರಭಸಕ್ಕೆ ಬಸ್ ಚಾಲಕ ಸೇರಿದಂತೆ ಪ್ರಯಾಣಿಕರು ಸೀಟಿನಿಂದ ಬಿದ್ದಿದ್ದಾರೆ.

ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಗಾಯಾಳುಗಳನ್ನ ಸೇಲಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT