ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತುಕತೆ ವಿಫಲವಾದರೆ ಚೀನಾ ವಿರುದ್ಧ ಸೇನಾ ಆಯ್ಕೆಗಳು ಮುಕ್ತವಾಗಿವೆ: ಬಿಪಿನ್ ರಾವತ್

Last Updated 24 ಆಗಸ್ಟ್ 2020, 5:52 IST
ಅಕ್ಷರ ಗಾತ್ರ

ನವದೆಹಲಿ: ಗಡಿ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿ ಮಾತುಕತೆ ವಿಫಲವಾದರೆ ಚೀನಾ ವಿರುದ್ಧ ಸೇನಾ ಆಯ್ಕೆಗಳು ಭಾರತಕ್ಕೆ ಮುಕ್ತವಾಗಿವೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

‘ಲಡಾಖ್‌ನಲ್ಲಿ ಚೀನಾ ಸೇನೆಯು ಗಡಿ ಉಲ್ಲಂಘಿಸಿರುವ ವಿಷಯಕ್ಕೆ ಸಂಬಂಧಿಸಿ ಭಾರತಕ್ಕೆ ಸೇನಾ ಆಯ್ಕೆಗಳಿವೆ. ಆದರೆ, ಸೇನೆ ಮತ್ತು ರಾಜತಾಂತ್ರಿಕ ಮಾತುಕತೆಗಳು ವಿಫಲವಾದರಷ್ಟೇ ಅದನ್ನು ಉಪಯೋಗಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

ಗಾಲ್ವನ್ ಕಣಿವೆ ಸೇರಿದಂತೆ ನೈಜ ನಿಯಂತ್ರಣ ರೇಖೆಯ (ಎಲ್‌ಎಸಿ) ಹಲವು ಪ್ರದೇಶಗಳಲ್ಲಿ ಏಪ್ರಿಲ್‌ನಿಂದೀಚೆಗೆ ಚೀನಾ ಸೇನೆಯು ಯಥಾಸ್ಥಿತಿ ಬದಲಾಯಿಸಲು ಯತ್ನಿಸಿದೆ. ಯಥಾಸ್ಥಿತಿ ಕಾಯ್ದುಕೊಳ್ಳುವುದು ಮತ್ತು ಸೇನಾ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ಬಗ್ಗೆ ಸೇನೆ, ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆ ನಡೆಯುತ್ತಿವೆ. ಆದರೆ, ಇದನ್ನು ಚೀನಾ ಸೇನೆ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಮೂಲಗಳು ಇತ್ತೀಚೆಗೆ ಹೇಳಿದ್ದವು.

ಆದಾಗ್ಯೂ, ಚೀನಾ ವಿರುದ್ಧ ಯಾವ ರೀತಿಯ ಸೇನಾ ಕ್ರಮ ಕೈಗೊಳ್ಳಲಾಗುವುದು ಎಂಬ ಪ್ರಶ್ನೆಗೆ ಉತ್ತರಿಸಲು ರಾವತ್ ನಿರಾಕರಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT