ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವುದೇ ಭದ್ರತಾ ಸವಾಲು ಎದುರಿಸಲು ಸಶಸ್ತ್ರ ಪಡೆಗಳು ಸಿದ್ಧ: ಬಿಪಿನ್‌ ರಾವತ್‌

Last Updated 14 ಆಗಸ್ಟ್ 2021, 3:13 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಸಶಸ್ತ್ರ ಪಡೆಗಳು ಯಾವುದೇ ರೀತಿಯ ಭದ್ರತಾ ಸವಾಲುಗಳನ್ನು ಎದುರಿಸಲು ಸಿದ್ಧವಾಗಿವೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್‌) ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

ಸ್ವಾತಂತ್ರ್ಯೋತ್ಸವದ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು , ಸೇನೆಯ ಮೂರೂ ಪಡೆಗಳ ನಡುವೆ ಸಹಕಾರ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳು ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಹೆಚ್ಚಿಸಲಿವೆ ಎಂದು ಹೇಳಿದ್ದಾರೆ.

ಸಶಸ್ತ್ರ ಪಡೆಗಳನ್ನು ಆಧುನೀಕರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನಗಳನ್ನೂ ಉಲ್ಲೇಖಿಸಿದ ಅವರು, ಪಡೆಗಳ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಬೇಕಾದ ಅಗತ್ಯವಿದೆ ಎಂದಿದ್ದಾರೆ.

ಭಾರತವು ಶಾಂತಿಪ್ರಿಯ ದೇಶ. ಆದರೆ ಮುಂದಿರುವ ಸವಾಲುಗಳನ್ನು ಪರಿಗಣಿಸಿ ಸೇನೆಯನ್ನು ಯುದ್ಧ ಸನ್ನದ್ಧವಾಗಿರುವಂತೆ ತರಬೇತಿ ನೀಡುವ ಅಗತ್ಯ ದೇಶಕ್ಕಿತ್ತು ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT